7:37 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ

05/12/2024, 22:16

ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಅವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದ್ದಾರೆ.
ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, ಮಸಾಜ್ ಪಾರ್ಲರ್ ನಂತಹ ಅಕ್ರಮ ಚಟುವಟಿಕೆಗಳು ಮಂಗಳೂರು ನಗರಾದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದರೂ ಅದರ ವಿರುದ್ದ ಚಕಾರ ಶಬ್ದವೆತ್ತದ ಕಮಿಷನರ್ ಜನಪರ ಹೋರಾಟಗಳನ್ನೇ ಹತ್ತಿಕ್ಕಲು ಮುಂದಾಗಿರುವುದು ಪೋಲಿಸ್ ರಾಜ್ಯವನ್ನು ನಿರ್ಮಿಸಲು ಹೊರಟಂತಿದೆ ಎಂದು
ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ,
ಯುವಜನರು ಗಾಂಜಾ ಅಫೀಮಿಗೆ ಬಲಿಯಾಗಿ ಅಕ್ರಮಕೂಟಗಳ ಕಾಲಾಳುಗಳಾಗಿ ದುಡಿದು ಮನೆ ಸೇರದ ಕೊರಗಿಗೆ ಅವರ ಹೆತ್ತ ಕರುಳು ನೆಮ್ಮದಿಯಿಂದ ಮಲಗುವ ದಿನಗಳನ್ನು ಮರೆತಿದ್ದಾರೆ. ಸಭಾಪತಿಗಳು ತಮ್ಮ ಜವಾಬ್ದಾರಿ ಮರೆತ ಕಾರಣ ಉಳ್ಳಾಲದ ಜನ ಮೂಲಭೂತ ಸೌಕರ್ಯಗಳಿಲ್ಲದೆ ಮಲಗಲಾಗದ ಸ್ಥಿತಿ ಎದುರಿಸುತ್ತಿದ್ದಾರೆ. ಕೂಡಲೇ ಕಮೀಷನರ್ ಅಗ್ರವಾಲ್ ಅವರನ್ನು ವರ್ಗಾಹಿಸಲು ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೊಟ್ಟು, ಹಿರಿಯ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ವಿಲಾಸಿನಿ ತೊಕ್ಕೊಟ್ಟು, ಪ್ರಮೋದಿನಿ, ರಮೇಶ್ ಉಳ್ಳಾಲ, ಶೇಕರ್ ಕುಂದರ್, ರಫೀಕ್ ಹರೇಕಳ,ಜನಾರ್ಧನ ಕುತ್ತಾರ್,ಚಂದ್ರಹಾಸ ಪಿಲಾರ್,ರೋಹಿದಾಸ್, ಪದ್ಮನಾಭ ಕುಂಪಲ, ಡಿವೈಎಫ್ಐ ಮುಖಂಡರುಗಳಾದ ಅಸ್ಫಕ್ ಅಲೇಕಳ, ರಝಾಕ್ ಮುಡಿಪು, ರಝಾಕ್ ಮೊಂಟೆಪದವು, ಅಶ್ರಫ್ ಹರೇಕಳ, ಅಮೀರ್ ಉಳ್ಳಾಲಬೈಲ್, ನವೀಝ್, ದಿವ್ಯರಾಜ್ ಕುತ್ತಾರ್ , ಸುನೀಲ್ ತೇವುಲ, ಇಕ್ಭಾಲ್ ಹರೇಕಳ, ಸರ್ಫರಾಝ್ ಗಂಡಿ ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷರಾದ ನಿತಿನ್ ಕುತ್ತಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ರಿಝ್ವಾನ್ ಹರೇಕಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು