1:36 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ

05/12/2024, 23:04

ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ.
ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶಿಯತೆ, ದೇಶೀಯ ಕಲೆಗಳ ಅನಾವರಣ, ಪರಿಸರ ಪ್ರಜ್ಞೆ, ಸಾಹಸ ಕ್ರೀಡೆಗಳು, ಸೌಹಾರ್ದತೆ ಸಾಮರಸ್ಯ ಬದುಕಿನ ತಿಳುವಳಿಕೆ, ಸೌಂದರ್ಯ ಪ್ರಜ್ಞೆ, ಕೃಷಿಯ ಬದುಕು, ಕರಕುಶಲಗಳ ತಿಳುವಳಿಕೆ, ದೇಶೀಯ ಆಹಾರ ಪದಾರ್ಥಗಳ ಪರಿಚಯ, ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆಯ ಪ್ರಾತ್ಯಕ್ಷಿಕೆಗಳ ಕಲಿಕೆ, ಮನೋರಂಜನೆಗಳು, ಯೋಗ, ಪ್ರಾಣಾಯಾಮ ತರಬೇತಿಗಳು, ಸೇವಾ ಮನೋಭಾವನೆ ಮೊದಲಾದ ವಿಚಾರಗಳಲ್ಲಿ ಅರ್ಥಪೂರ್ಣ ತರಬೇತಿ ನೀಡಲಾಗುವುದು.
ಭಾಗವಹಿಸುವ ಶಿಬಿರಾರ್ಥಿಗಳು ದಿನಾಂಕ ೦೯.೧೨.೨೦೨೪ರಂದು ಸಂಜೆ ೫.೦೦ ಗಂಟೆಯ ಒಳಗಾಗಿ ಸ್ಕೌಟ್ಸ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನ, ಮೂಡುಬಿದಿರೆ ಇಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು