1:17 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬಂಟ್ವಾಳ: ರಿಕ್ಷಾ- ಕಾರು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, ಇತರ 8 ಮಂದಿಗೆ ಗಾಯ

06/12/2024, 00:48

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಇಲ್ಲಿಗೆ ಸಮೀಪದ ವಗ್ಗ ಬಳಿಯ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ 8 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್ ಎಂಬವರ ಪತ್ನಿ ತಿಲಕ (40) ಅವರು ಮೃತಪಟ್ಟಿದ್ದಾರೆ.
ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ , ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್ ಹಾಗೂ ದಿಶಾನಿ ಅವರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.
ಮದ್ವದಲ್ಲಿ ನಡೆದ ಸಂಬಂಧಿಕರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಸು ಮನೆಗೆ ಬರುತ್ತಿರುವ ಸಮಯ ಬಾಂಬಿಲದಲ್ಲಿ ಅಪಘಾತ ಸಂಭವಿಸಿದೆ. ತಿಲಕ ಅವರ ಜೊತೆ ಸಂಬಂಧಿಕರು ಪಂಜಿಕಲ್ಲುವಿನಿಂದ ನಾರಾಯಣ ಪೂಜಾರಿ ಎಂಬವರ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಹೋಗಿದ್ದರು. ರಿಕ್ಷಾದಲ್ಲಿದ್ದ ಎಲ್ಲರೂ ಕೂಡ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಬರುತ್ತಿದ್ದರು ಎನ್ನಲಾಗಿದೆ.
ತಿಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರಿಗೆ ಗಂಭೀರವಾಗಿ ಗಾಯವಾಗಿದೆ ಎನ್ನಲಾಗಿದೆ.
ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅಪಘಾತದಲ್ಲಿ ಮೃತರಾದ ತಿಲಕ‌ ಅವರ ಮೃತದೇಹ ಇರಿಸಲಾದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ, ಲಕ್ಮೀನಾರಾಯಣ ಗೌಡ, ಮೋಹನ್ ದಾಸ ಪೂಜಾರಿ, ಪ್ರವೀಣ್, ಕರುಣೇಂದ್ರ ಪೂಜಾರಿ, ಪ್ರಕಾಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.
ಘಟನೆಯ ಕುರಿತು ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು