1:40 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಒಬ್ಬ ಮಹಾನ್ ಚೇತನ: ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ.

06/12/2024, 18:04

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾಸಾಹೇಬ್.ಬಿ.ಆರ್.ಅಂಬೇಡ್ಕರ್ ಅವರು ಎಂದು ವಿಜಯಪುರದ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ. ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ನಿರ್ಲಕ್ಷ್ಯ ಹಾಗೂ ತಾತ್ಸಾರಕ್ಕೆ ಒಳಗಾಗಿದ್ದ ಮಹಿಳೆಯರ ಪರವಾಗಿ ಧ್ವನಿ ಎತ್ತಿದವರು ಅಂಬೇಡ್ಕರ್ ಅವರು. ಶೋಷಿತ ವರ್ಗದ ಏಳ್ಗೆಗಾಗಿ ಜೀವನ ಮುಡಿಪಾಗಿಟ್ಟ ಬಾಬಾ ಸಾಹೇಬರು, ಸಂವಿಧಾನದ ಪ್ರತಿ ಪುಟದಲ್ಲೂ ಇಂದಿಗೂ ಜೀವಿಸುತ್ತಿದ್ದಾರೆ ಎಂದರು.
ಇತಿಹಾಸ ಎಂಬುದು ತಾಯಿಗರ್ಭದಷ್ಟೆ ಪವಿತ್ರವಾದದ್ದು, ಹಾಗಾಗಿ ಪ್ರತಿ ಸಂಗತಿಗಳನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸುವುದು ಯೋಗ್ಯ ಎಂದು ತಿಳಿಸಿದರು.
ಮೌಢ್ಯ ಆಚರಣೆ, ಧರ್ಮದ ಅಮಲು ಬದಿಗೊತ್ತಿ ಸಂವಿಧಾನದ ಚೌಕಟ್ಟಿನಲ್ಲಿ ಜಾತ್ಯತೀತ ರಾಷ್ಟçದಲ್ಲಿ ನಾವೆಲ್ಲ ಸಹಬಾಳ್ವೆಯಿಂದಜೀವನ ನಡೆಸಬೇಕು ಎಂದು ಕರೆ ನೀಡಿದರು.
ಶೋಷಣೆ ರಹಿತ ಸಮಾಜ, ಗೌರವಯುತ ಸಹಬಾಳ್ವೆ, ಸಮಾನತೆ, ಏಕತೆ ಪರಿಕಲ್ಪನೆಗೆ ನಾಂದಿ ಹಾಡಿದ ಅಂಬೇಡ್ಕರ್ ಅವರು ಎಂದೆಂದಿಗೂ ಅಮರ ಎಂದು ಹೇಳಿದರು.
ವಿವಿಯ ಸಿಂಡಿಕೇಟ್ ಸದಸ್ಯರಾದ ಜಯಲಕ್ಷ್ಮಿ ನಾಯಕ್ ಅವರು ಮಾತನಾಡಿ, ಕೇವಲ ನಿಯಮಗಳನ್ನು ರೂಪಿಸುವುದು, ನಿಯಮಗಳನ್ನು ಪಾಲಿಸುವುದು ವಿಶ್ವವಿದ್ಯಾಲಯದ ಕೆಲಸವಾಗದೇ ಮಾನವೀಯ ಮೌಲ್ಯಗಳನ್ನು ರೂಪಿಸುವ ಕೇಂದ್ರವಾಗಬೇಕು ಎಂಬುದು ಬಾಬಾಸಾಹೇಬರ ಕನಸಾಗಿತ್ತು. ಇದನ್ನು ನಾವೆಲ್ಲರೂ ಪಾಲಿಸಿ ಸಮಾಜಕ್ಕೆ ತಮ್ಮ ಹಕ್ಕುಗಳ ಬದ್ಧತೆ ಪ್ರದರ್ಶಿಸಲು ನೆರವಾಗಬೇಕು ಎಂದರು.
ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಹಿಂದುಳಿದ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಆರಂಭಿಸಲಾಗುವುದು ಎಂದು ಘೋಷಿಸಿದರು.


ಅಂಬೇಡ್ಕರ್ ಅವರು ಕೇವಲ ದಲಿತ ನಾಯಕರಲ್ಲ, ಅವರೊಬ್ಬ ವಿಶ್ವ ನಾಯಕ ಎಂದು ಬಣ್ಣಿಸಿದರು.
ಕುಲಸಚಿವ ರುದ್ರೇಶ್ಎಸ್.ಎನ್., ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಓಲೇಕಾರ್, ಕಾರ್ಯಕ್ರಮ ಸಂಯೋಜಕರಾದ ಪ್ರೊ.ಗೌರಿ ಮಾಣಿಕ್ ಮಾನಸ ವೇದಿಕೆಯಲ್ಲಿದ್ದರು.
ಡಾ.ಕವಿತಾ ಸಾಗರ್ ನಿರೂಪಿಸಿ, ವಂದಿಸಿದರು.
ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು