9:06 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಉರ್ವ ಪೊಂಪೈ ಮಾತೆ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ನಾಳೆ: ಕೊಸೆಸಾಂವ್ ಮಾತೆಯ ಹಬ್ಬ ಇಂದು

06/12/2024, 23:46

ಮಂಗಳೂರು(reporterkarnataka.com): ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ. 8ರಂದು ನಡೆಯಲಿದೆ.
ಆ ದಿನ ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ವಿಶೇಷ ಅರಾಧನಾ ವಿಧಿಯನ್ನು ಮಂಗಳ ಜ್ಯೋತಿ ನಿರ್ದೇಶಕ ಫಾ. ವಿಜಯ್ ಮಚಾದೋ ನಡೆಸಿಕೊಡಲಿದ್ದಾರೆ.
ಹಬ್ಬದ ದಿನದ ಇತರ ಕಾರ್ಯಕ್ರಮಗಳಲ್ಲಿ ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ಆನಾರೋಗ್ಯದಿಂದ ಬಳಲುವವರಿಗೋಸ್ಕರ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಯಲಿದೆ. ಈ ಪೂಜೆಯನ್ನು ವಿಗಾರ್ ಜೆರಾಲ್ ಫಾ. ಮ್ಯಾಕ್ಸಿಂ ನೊರೊನ್ಹಾ ಅವರು ನೆರವೇರಿಸಲಿದ್ದಾರೆ.


ಡಿ.7ರಂದು ಕೊಸೆಸಾಂವ್ ಮಾತೆಯ ಹಬ್ಬ ನಡೆಯಲಿದ್ದು, ಸಂಜೆ 5ಕ್ಕೆ ಜಪಮಾಲೆ, 5.30ಕ್ಕೆ ಪೆರ್ಮನ್ನೂರು ಚರ್ಚಿನ ಸಹಾಯಕ ಧರ್ಮಗುರು ಫಾ. ಜಾನ್ಸನ್ ಪಿರೇರಾ ಅವರಿಂದ ಕೃತಜ್ಞತಾ ಪೂಜೆ ಹಾಗೂ ನೊವೆನಾ ನೆರವೇರಿಸಲಿದ್ದಾರೆ. ಹಬ್ಬದ ಪೂರ್ವಭಾವಿಯಾಗಿ ನವದಿನಗಳ ನೊವೆನಾಗಳು ನಡೆದಿದ್ದು ಸಾವಿರಾರು ಭಕ್ತರು ಪ್ರಾರ್ಥನ ವಿಧಿಯಲ್ಲಿ ಭಾಗವಹಿಸಿದರು ಎಂದು ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ ಅವರು ತಿಳಿಸಿದ್ದಾರೆ.
*ಪೊಂಪೈ ಮಾತೆ ಎಂದರೆ ಯಾರು?*
ಪ್ರಭು ಯೇಸುವಿನ ತಾಯಿ ಮರಿಯಳನ್ನು ಪೊಂಪೈ ಮಾತೆ ಎಂದು ಕರೆಯಲಾಗುತ್ತದೆ.
ಇಟಲಿಯ ಪೊಂಪೈ ಕಣಿವೆ ಪ್ರದೇಶದಲ್ಲಿ ಜನರು ದೈವಭಕ್ತಿಯಾಗಲಿ, ಪರಸ್ಪರ ಕಾಳಜಿಯಾಗಲೀ ಇಲ್ಲದೆ ಅನಾಗರಿಕರಂತೆ ಬಾಳುತ್ತಿದ್ದ ಸಂದರ್ಭದಲ್ಲಿ ಅಲ್ಲಿನ ಜನರ ಮನಃ ಪರಿವರ್ತನೆಗಾಗಿ 1872ರಲ್ಲಿ ಬಾರ್ತೊಲೊ ಲೊಂಗೊ ಎಂಬ ಯುವ ವಕೀಲರಿಗೆ ಮಾತೆ ಮರಿಯಳು ದರ್ಶನವಿತ್ತು ಪ್ರಾರ್ಥಿಸಲು ಕರೆ ನೀಡಿದರು. ಈ ದರ್ಶನದ ನಂತರ ಪೊಂಪೈ ಊರಿನಲ್ಲಿ ಜನರ ಮನಃ ಪರಿವರ್ತನೆಯಾಯಿತು ಮತ್ತು ಊರಿಗೆ- ಊರೇ ಸರಿದಾರಿಗೆ ಬಂತು. ಪೊಂಪೈ ನಗರದಲ್ಲಿ ಮಾತೆ ಮರಿಯಳ ದರ್ಶನವಾಗಿರುವುದರಿಂದ ಆಕೆಯನ್ನು ಪೊಂಪೈ ಮಾತೆಯೆಂಬುದಾಗಿ ಕರೆಯುತ್ತಾರೆ. ಪೊಂಪೈ ಮಾತೆಯ ಭಕ್ತಿ ಪ್ರಪಂಚದಾದ್ಯಂತ ಹಬ್ಬಿತು. ಉರ್ವ ಚರ್ಚ್‍ನಲ್ಲಿ ಪೊಂಪೈ ಮಾತೆಗಾಗಿ 1895ರಲ್ಲಿ ಒಂದು ಪೀಠವನ್ನು ಸ್ಥಾಪಿಸುವುದರ ಮೂಲಕ ಪೊಂಪೈ ಮಾತೆಯ ಭಕ್ತಿ ಆರಂಭವಾಯಿತು. 1995 ರಲ್ಲಿ ಈಗಿರುವ ಪುಣ್ಯಕ್ಷೇತ್ರದ ಕಟ್ಟಡವನ್ನು ಕಟ್ಟಲಾಯಿತು. ಈ ಪುಣ್ಯಕ್ಷೇತ್ರಕ್ಕೆ ವರ್ಷವಿಡೀ ಭಕ್ತಾದಿಗಳು ಭೇಟಿ ನೀಡಲು ಬರುತ್ತಾರೆ. ತಮ್ಮ ನಾನಾ ಕೋರಿಕೆಗಳಿಗೋಸ್ಕರ ಪ್ರಾರ್ಥಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು