10:22 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾದ ಕಳಪೆ ಶೌಚಾಲಯ: ಸಿಡಿದೆದ್ದ ಶಾಸಕರಿಂದ ಅಧಿಕಾರಿಗಳ ತರಾಟೆ

07/12/2024, 20:55

*ಏನ್ರೀ ಇದು.. ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ...!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೈ ಮತ್ತು ಕಾಲಿನಲ್ಲಿ ಟಚ್ ಮಾಡಿದ್ರೆ ಸಾಕು ಪೈಪ್ ಗಳು ಕಿತ್ತು ಬರುತ್ತಿವೆ. ಏನ್ರೀ ಇದು ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಶಾಸಕ ದರ್ಶನ್ ಧ್ರುವನಾರಾಯಣ್ ಗುಡುಗಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಲಾಗಿದ್ದ, ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 4 ಕೊಠಡಿಗಳು ಮತ್ತು 3 ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಲು ಬಂದ ಶಾಸಕ ದರ್ಶನ್ ಧ್ರುವನಾರಾಯಣ್ ಶೌಚಾಲಯದ ಕಳಪೆ ಕಾಮಗಾರಿಯನ್ನು ನೋಡಿ ಶಾಕ್ ಆಗಿದ್ದಾರೆ. ಟೇಪ್ ಕತ್ತರಿಸಿ ಉದ್ಘಾಟನೆ ಮಾಡಿದ ಬಳಿಕ ಪರಿಶೀಲನೆ ನಡೆಸಿದ ಅವರು ಶೌಚಾಲಯಕ್ಕೆ ಅಳವಡಿಸಿರುವ ವಸ್ತುಗಳು ಕ್ವಾಲಿಟಿ ಇಲ್ಲ, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ. ಸರಿಯಾಗಿ ಕೆಲಸ ಮಾಡದೆ ಎಲ್ಲರೂ ಆಟ ಆಡ್ತಾ ಇದ್ದೀರಾ…! ಏನ್ರೀ ಇದು ಕಾಮಗಾರಿ..? ಇಂತಹ ಕಳಪೆ ಕಾಮಗಾರಿ ಉದ್ಘಾಟನೆ ಮಾಡಲು ಏಕೆ ಕರೆದಿದ್ದೀರಾ.. ಎಂದು ನಿರ್ಮಿತಿ ಕೇಂದ್ರದ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಿಗ್ಗಾ ಮಗ್ಗ ತರಾಟೆಗೆ ತೆಗೆದುಕೊಂಡರು ಈ ಕೂಡಲೇ ಗುಣಮಟ್ಟದ ವಸ್ತುಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಖಡಕ್ ಸೂಚನೆ ನೀಡಿದರು.
ಇದೇ ಸಂದರ್ಭ ನಂಜನಗೂಡು ನಗರದ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 1.62 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿಪೂಜೆ ನೇರವೇರಿಸಿದರು.


ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಶಾಸಕ ದರ್ಶನ್ ದೃವನಾರಾಯಣ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ನಗರಸಭಾ ಪೌರಯುಕ್ತರಾದ ನಂಜುಂಡಸ್ವಾಮಿ, ನಗರಸಭಾ ಸದಸ್ಯರಾದ ಮಹೇಶ್, ನಗರಸಭಾ ಇಂಜಿನಿಯರ್ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು