7:25 PM Tuesday25 - November 2025
ಬ್ರೇಕಿಂಗ್ ನ್ಯೂಸ್
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕಳವಳಕಾರಿ: ಶಾಸಕ ಡಾ.ಭರತ್ ಶೆಟ್ಟಿ

08/12/2024, 19:10

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವ ಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಇಎಸ್‌ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ. ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು