1:42 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಶಾಸಕ ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ ನೀಡುವಂತೆ ದಲಿತ ಮುಖಂಡರ ಒತ್ತಾಯ

09/12/2024, 19:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಚಿವ ಸ್ಥಾನ ನೀಡುವಂತೆ ನಂಜನಗೂಡು ತಾಲೂಕಿನ ದಲಿತ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಾಯ ಮಾಡಿದ್ದಾರೆ.
ಇಂದು ಮೈಸೂರು ಜಿಲ್ಲಾ ಪತ್ರಪತ್ರಕರ್ತರ ಸಂಘದಲ್ಲಿ ಕಾಂಗ್ರೆಸ್ ಮುಖಂಡರಾದ ವಿಸಿ ಶ್ರೀನಿವಾಸಮೂರ್ತಿ ಹಾಗೂ ಪುಟ್ಟ ಬುದ್ದಿ ಸುದ್ದಿಗೋಷ್ಠಿ ನಡೆಸಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಂಡರು
ಶಾಸಕ ದರ್ಶನ್ ದ್ರುವ ನಾರಾಯಣ್ ಅವರ ತಂದೆ ದಿವಂಗತ ಮಾಜಿ ಸಂಸದರಾದ ದೃವನಾರಾಯಣ್ ರವರು ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ ರಾಜ್ಯದ ನಂಬರ್ ಒನ್ ಸಂಸದೀಯ ಪಟು ಎಂದು ಜನ ಮನ್ನಣೆ ಪಡೆದಿದ್ದರು.ಅಲ್ಲದೆ ಪಕ್ಷದ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ನಿರಂತರ ಹಾಗೂ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷವು ಅಧಿಕಾರಕ್ಕೆ ಬರಲು ಅವರು ಕೂಡ ಪ್ರಮುಖರಾಗಿದ್ದರು
ಅವರ ಅಕಾಲಿಕ ಮರಣದಿಂದಾಗಿ ಅವರ ಪುತ್ರ ದರ್ಶನ್ ಧ್ರುವನಾರಾಯಣ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ನಂಜನಗೂಡಿನ ಶಾಸಕರಾಗಿದ್ದಾರೆ. ಅವರು ಕೂಡ ಅವರ ತಂದೆಯಂತೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಜನಾನುರಾಗಿಯಾಗಿದ್ದಾರೆ.
ಹಾಗಾಗಿ ಮುಂದೆ ಸಚಿವ ಸಂಪುಟ ಪುನರ್ ರಚನಾ ಸಂದರ್ಭದಲ್ಲಿ ಅವರ ತಂದೆ ಹಾಗೂ ಇವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಈ ಭಾಗದ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿಗೆ ಒತ್ತು ಸಹಕಾರಿಯಾಗುತ್ತದೆ ಎಂದು ಪಕ್ಷದ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ಎಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರುಗಳನ್ನು ವಿನಯ ಪೂರ್ವಕವಾಗಿ ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ, ಮುಖಂಡರುಗಳಾದ ವಿಜಯಕುಮಾರ್, ಮಂಜುನಾಥ್, ಜಗದೀಶ್, ಹುಚ್ಚಯ್ಯ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು