6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಸಂಸತ್ತಿಗೆ ಆಯ್ಕೆಯಾದ ಇಬ್ಬರು ಮಾಜಿ ಸಿಎಂಗಳಿಗೂ ಆಸನದ ವ್ಯವಸ್ಥೆ!

09/12/2024, 23:41

ಬೆಳಗಾವಿ(reporterkarnataka.com): ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆದ್ದ ಇಬ್ಬರು ನೂತನ ಶಾಸಕರಿಗೆ ಆಸನದ ವ್ಯವಸ್ಥೆ ಮಾಡುವ ಬದಲು ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನಡೆದಿದೆ. ಇತ್ತೀಚೆಗೆ ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಗೆದ್ದಿರುವ ನೂತನ ಶಾಸಕರಿಗೆ ಆಸನ ವ್ಯವಸ್ಥೆಯನ್ನು ಮಾಡಬೇಕಿತ್ತು. ಆದರೆ, ಈ ವಿಚಾರದಲ್ಲಿ ಎಡವಟ್ಟು ಆಗಿದೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ, ನೂತನ ಸಂಸದರಾಗಿರುವ ಇಬ್ಬರು ಮಾಜಿ ಸಿಎಂಗಳಿಗೂ ಆಸನ ಮೀಸಲಿರಿಸಲಾಗಿದೆ.
ಸುವರ್ಣ ವಿಧಾನಸಭೆಯಲ್ಲಿ ಮಾಜಿ ಶಾಸಕರ ಹೆಸರಿನಲ್ಲಿ ಆಸನ ಮೀಸಲಾಗಿಟ್ಟು ಬೆಳಗಾವಿ ಜಿಲ್ಲಾಡಳಿತ ನಗೆಪಾಟಿಲಿಗೀಡಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಹೆಸರಲ್ಲಿ ಆಸನಗಳು ಮೀಸಲಿರಿಸಲಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು