5:28 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರಕಾರಿ ರಜೆ; ಶಾಲಾ- ಕಾಲೇಜು ಬಂದ್

10/12/2024, 12:23

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಅವರು ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಬುಧವಾರ (ಡಿ. 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 12ರವರೆಗೆ ಶೋಕಾಚರಣೆ ಇದ್ದು,3 ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಖಾಸಗಿ ಹಾಗೂ ಸರಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಎಸ್​.ಎಂ. ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು