9:15 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮುರುಡೇಶ್ವರ: ಬಾಲಕಿಯರ ರಕ್ಷಿಸಲಾಗದೆ ಅಸಹಾಯಕರಾದ ಲೈಫ್ ಗಾರ್ಡ್; ಸಚಿವ ವೈದ್ಯರೇ ಏನು ಮಾಡುತ್ತಿದ್ದೀರಿ?

10/12/2024, 22:05

ಭಟ್ಕಳ(reporterkarnataka.com): ಮುರುಡೇಶ್ವರ ಸಮುದ್ರ ತೀರದಲ್ಲಿ ಸಮುದ್ರಪಾಲಾಗುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗದೆ ಇಲ್ಲಿನ ಲೈಫ್ ಗಾರ್ಡ್ ಗಳು ಅಸಹಾಯಕರಾದರು.
ಜೀವ ರಕ್ಷಣೆಗೆ ಬೇಕಾದ ಯಾವುದೇ ಸಲಕರಣೆ ಪೂರೈಸದ ಹಿನ್ನೆಲೆಯಲ್ಲಿ ಮಕ್ಕಳನ್ನ ರಕ್ಷಿಸಲಾಗದೆ ಲೈಫ್ ಗಾರ್ಡ್ಸ್ ಅಸಹಾಯಕರಾಗಿ ನೋಡಬೇಕಾಯಿತು. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಮಾಧ್ಯಮಗಳು ವರದಿ ಮಾಡಿದರೂ ಜಿಲ್ಲಾಡಳಿತವಾಗಲಿ, ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಜೀವ ರಕ್ಷಣೆಗೆ ಬೇಕಾಗುವ
ಸಲಕರಣೆ ಸಮಸ್ಯೆ ಬಗೆಹರಿಸುವ ಅಶ್ವಾಸನೆಯನ್ನು ಸಚಿವ ಮಂಕಾಳು ವೈದ್ಯ ನೀಡಿದ್ದರು. ಆದರೆ ನಾಲ್ವರು ಬಾಲಕಿಯರ ಪ್ರಾಣಪಕ್ಷಿ ಹಾರಿ ಹೋಗುವವರೆಗೂ ಅದು ಭರವಸೆಯಾಗಿಯೇ ಉಳಿಯಿತು.
ಕೆಲವು ದಿನಗಳ ಹಿಂದೆ ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ಪಾಲಾಗಿದ್ದರೂ ಕೂಡ ಅಗತ್ಯ ಸಲಕರಣೆ ಇಲ್ಲದ ಕಾರಣ ಲೈಫ್ ಗಾರ್ಡ್ಸ್​ಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಹೀಗಾಗಿ ತಾಲೂಕಾಡಳಿತ‌ ಪ್ರವಾಸಿಗರನ್ನು ಕಡಲ ತೀರಕ್ಕೆ ನಿರ್ಬಂಧಿಸಿತ್ತು. ಬಳಿಕ ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿತ್ತು. ಆದರೆ ಸುರಕ್ಷತೆ ಕ್ರಮ ಮಾತ್ರ ಕೈಗೊಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು