1:49 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ

11/12/2024, 12:32

ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.


ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ರವರಿಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ, ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಢನೀಯ ಕಮೀಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ. ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು.
ಹೋರಾಟದ ನೇತೃತ್ವವನ್ನು ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು