8:37 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಎಸ್ ಡಿಎಂ ಲಾ ಕಾಲೇಜಿಗೆ ಸುವರ್ಣ ಮಹೋತ್ಸವ ಸಂಭ್ರಮ: ಡಿ.14ರಂದು ಸ್ಥಾಪಕರ ದಿನಾಚರಣೆ; 15ರಂದು ಪೂರ್ವ ವಿದ್ಯಾರ್ಥಿಗಳ ಪುನರ್‌ ಮಿಲನ

12/12/2024, 12:36

ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಬೈಲಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಸಂಭ್ರಮ ಡಿ.14 ಮತ್ತು 15ರಂದು ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಲಿದೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ತಾರಾನಾಥ್ ಅವರು ಈ ಕುರಿತು ಮಾಹಿತಿ ನೀಡಿದರು.
ಡಿ. 14ರಂದು ಸ್ಥಾಪಕರ ದಿನಾಚರಣೆ ನಡೆಯಲಿದ್ದು, ಕೇರಳ ಹೈಕೋರ್ಟ್ ನ ನ್ಯಾಯಾಧೀಶ, ಎಸ್.ಡಿ. ಎಂ. ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ನ್ಯಾ. ಮುರಳೀಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ಕುಲಪತಿ ಪ್ರೊ. (ಡಾ) ಬಸವರಾಜು
ಸಭಾಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಪ್ರಧಾನ ಭಾಷಣ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿ, ಕಾಲೇಜಿನ ಪೂರ್ವ ವಿದ್ಯಾರ್ಥಿ ರೋಹಿತ್ ರಾವ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ತಮಿಳು ನಾಡಿನ ರಾಷ್ಟ್ರೀಯ ಕಾನೂನು ಶಾಲೆಯ ಕುಲಪತಿ ಪ್ರೊ. ನಾಗರಾಜ್‌ ಸ್ಥಾಪಕ ದಿನದ ಭಾಷಣ ಮಾಡಲಿದ್ದಾರೆ. ಡಿ. 15ರಂದು ಪೂರ್ವ ವಿದ್ಯಾರ್ಥಿ ಪನರ್‌ ಮಿಲನ ಕಾರ್ಯಕ್ರಮ
ನಡೆಯಲಿದ್ದು ಆಂಧ್ರ ಪ್ರದೇಶದ ರಾಜ್ಯಪಾಲರು, ಕಾಲೇಜಿನ ಪೂರ್ವ ವಿದ್ಯಾರ್ಥಿ ನ್ಯಾ. ಎಸ್. ಅಬ್ದುಲ್ ನಜೀರ್‌ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾರತ
ಸರಕಾರದ ಅಟಾರ್ನಿ ಜನರಲ್ ಡಾ. ಆರ್. ವೆಂಕಟ್ರಮಣಿ ಪ್ರದಾನ ಭಾಷಣ ಮಾಡಲಿದ್ದಾರೆ. ವಿಧಾನ ಸಭೆ ಸ್ಪೀಕರ್ ಹಾಗೂ ಕಾಲೇಜಿನ ಪೂರ್ವ ವಿದ್ಯಾರ್ಥಿ ಯು.ಟಿ.ಖಾದರ್, ಭಾರತ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್, ಕಾಲೇಜಿನ ಪೂರ್ವ ವಿದ್ಯಾರ್ಥಿ ಕೆ.ಎಂ. ನಟರಾಜ್‌, ರಾಜ್ಯ ಸರಕಾರದ ಹೆಚ್ಚುವರಿ ಎಡ್ವಕೇಟ್ ಜನರಲ್, ಕಾಲೇಜಿನ ಪೂರ್ವ ವಿದ್ಯಾರ್ಥಿ ಶಾಹುಲ್ ಹಮೀದ್ ರಹಮಾನ್ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ,
ಕಾಲೇಜಿನ ಹಳೆ ವಿದ್ಯಾರ್ಥಿ ಶೇಖ‌ ದೇವಸ ಮುಖ್ಯ ಅತಿಥಿಗಳಾಗಿರುತ್ತಾರೆ. ಉಭಯ ದಿನಗಳಂದು ಪೂರ್ವಾಹ್ನ ಗಂಟೆ
10ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮ ಯಕ್ಷಗಾನವೂ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರಕ್ರಮಗಳೊಂದಿಗೆ
ವೈಭವೋಪೇತವಾಗಿ ನಡೆಯಲಿದೆ ಎಂದು ಪ್ರಿನ್ಸಿಪಾಲರು ನುಡಿದರು.
ಪತ್ರಿಕಾ ಗೋಷ್ಠಿಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವರಾಜ್ ಕೆ., ಪುರುಷೋತ್ತಮ್ ಭಟ್, ಡಾ.ಬಾಲಿಕ, ಸತ್ಯಾತ್ಮ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು