10:02 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಡಿ.17: ಯಕ್ಷ ಪ್ರತಿಭೆ ಮಂಗಳೂರು 16ನೇ ವರ್ಷದ ಸಂಭ್ರಮ; ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ

12/12/2024, 12:37

ಮಂಗಳೂರು(reporterkarnataka.com): ಯಕ್ಷ ಪ್ರತಿಭೆ ಮಂಗಳೂರು ಇದರ 16ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.17ರಂದು ಸಂಜೆ 5:45ರಿಂದ ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ಸಂಘಟನೆ ಅಧ್ಯಕ್ಷ ಸಂಜಯ್ ಕುಮಾರ್ ಶೆಟ್ಟಿ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಈ ವರ್ಷದ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ ಅವರಿಗೆ ನೀಡಲಾಗುವುದು. ಅಸ್ರಣ್ಣ ಗೌರವ ಸನ್ಮಾನವನ್ನು ಖ್ಯಾತ ಹೃದಯ ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಅವರಿಗೆ, ಯಕ್ಷ ಸನ್ಮಾನ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಖ್ಯಾತ ಮೃದಂಗ ವಾದಕರು ಹಾಗೂ ಜನಾರ್ದನ ಅಮ್ಮುಂಜೆ ಸಂಘಟಕರು ಹಾಗೂ ಖ್ಯಾತ ನಿರೂಪಕರಿಗೆ ನೀಡಲಾಗುವುದು ಎಂದರು.
ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ ಶುಭ ಹಾರೈಸಲಿದ್ದು ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದಾನಿ ಗ್ರೂಪ್ ನ ಕಿಶೋರ್ ಆಳ್ವ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮೇಯರ್ ಮನೋಜ್ ಕುಮಾರ್, ಅರುಣ್ ಐತಾಳ್ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಗೌರವ ಸಲಹೆಗಾರ ಅಗರಿ ರಾಘವೇಂದ್ರ ರಾವ್, ಸುಜಾತ ಶೆಟ್ಟಿ, ಮೋಹನ್ ದಾಸ್ ರೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು