12:35 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಚಳ್ಳಕೆರೆ ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ 260 ಕೋಟಿ ಅನುದಾನ ಒದಗಿಸಲು ಶಾಸಕ ರಘುಮೂರ್ತಿ ಆಗ್ರಹ

12/12/2024, 18:00

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmsil.com

ಚಳ್ಳಕೆರೆ ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 260 ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಶಾಸಕ ಟಿ. ರಘುಮೂರ್ತಿ ಆಗ್ರಹಿಸಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯಡಿ ಮಾತನಾಡಿ, ಚಳ್ಳಕೆರೆ ನಗರವು ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿ, ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ನಿರ್ಮಾಣಕ್ಕೆ ಅಗತ್ಯವಿರುವ 260 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಒತ್ತಾಯಿಸಿದರು.
ಚಳ್ಳಕೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ (ಯುಜಿಡಿ) ಕಲ್ಪಿಸಲು 2013ರಲ್ಲಿಯೇ ಪ್ರಸ್ತಾಪಿಸಲಾಗಿತ್ತು. ಬಳಿಕ 2021ರಲ್ಲಿ ಈ ಯೋಜನೆಗೆ 197 ಕೋಟಿ ರೂ. ಗಳ ಅಂದಾಜು ಮಾಡಲಾಗಿತ್ತು. ಇದೀಗ ಯೋಜನೆಯ ವೆಚ್ಚ 253 ಕೋಟಿ ರೂ. ಆಗಿದೆ. ಈಗ ಮತ್ತೊಮ್ಮೆ‌ ಮನವಿ ಸಲ್ಲಿಸಲಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಭೈರತಿ ಸುರೇಶ್ ಅವರು, 2015ರಲ್ಲಿ ಈ ಯೋಜನೆ 100 ಕೋಟಿ ರೂ. ಗಳ ವೆಚ್ಚದಲ್ಲಿ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಸುಮಾರು 260 ಕೋಟಿ ರೂ. ಗಳ ವೆಚ್ಚದ ಅಂದಾಜು ಮಾಡಲಾಗಿದೆ. ಹೀಗಾಗಿ ಹಣಕಾಸು ಇಲಾಖೆಯ ಸಲಹೆ ಪಡೆದು, ಹಣಕಾಸಿನ ಲಭ್ಯತೆ ನೋಡಿಕೊಂಡು, ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು