6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ: ಗೃಹ ಸಚಿವ ಡಾ. ಪರಮೇಶ್ವರ್

12/12/2024, 19:57

ಬೆಳಗಾವಿ (reporterkarnataka.com):ರಾಜ್ಯಾದ್ಯಂತ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇವುಗಳ ನಿಯಂತ್ರಣಕ್ಕೆ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.
ಮಹಿಳೆಯರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ದೌರ್ಜನ್ಯ ನಡೆಯುವುದನ್ನು ತಡೆಯಲು ಸೇಫ್ಟಿ ಐಲ್ಯಾಂಡ್ ಗಳನ್ನು ರಚಿಸಲಾಗಿದೆ. ಮಹಿಳೆಯರು ದೂರು ನೀಡಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆ 1091 ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಕುರಿತು ದೂರು ನೀಡಲು ಸಹಾಯವಾಣಿ 1098 ಮೂಲಕ 24*7 ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.
ನ್ಯಾಯಾಲಯಗಳಲ್ಲಿ ಈಗಾಗಲೇ ದಾಖಲಾಗಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಪೋಕ್ಸೋ ಪ್ರಕರಣಗಳ ವಿಚಾರಣೆ ಬೇಗ ಇತ್ಯರ್ಥವಾಗುವ ಕುರಿತಂತೆ ಹೆಚ್ಚು ಗಮನಹರಿಸಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು