8:15 PM Saturday28 - December 2024
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಹಿಂದಿಯೇತರ ಭಾಷೆಗಳ ಉಳಿವಿಗಾಗಿ ಕೇಂದ್ರ ಸರಕಾರ ಭಾಷಾ ನಿರ್ದೇಶಕರನ್ನು ನೇಮಿಸಲಿ: ಡಾ.ಪುರುಷೋತ್ತಮ ಬಿಳಿಮಲೆ

12/12/2024, 22:25

*ದಕ್ಷಿಣ ಭಾರತದ ರಾಜ್ಯಗಳು ಸಂಘಟಿತರಾಗಲು ಕರ್ನಾಟಕವೇ ಮುಂದಡಿ ಇಡಲು ಮುಖ್ಯಮಂತ್ರಿಗಳಿಗೆ ಆಗ್ರಹ*

ಬೆಂಗಳೂರು(reporterkarnataka.com):ದೇಶಾದ್ಯಂತ ಹಿಂದಿ ಹೇರಿಕೆಯ ಪ್ರಾಬಲ್ಯ ಹೆಚ್ಚುತ್ತಿರುವ ಈ ದಿನಗಳಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಭಾರತೀಯ ರಾಜ್ಯಗಳು ಸಂಘಟಿತರಾಗಬೇಕಿದೆ. ಸಾಂವಿಧಾನಿಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಈ ರಾಜ್ಯಗಳು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕಿದ್ದು, ಕರ್ನಾಟಕದಿಂದಲೇ ಈ ಹೋರಾಟ ಆರಂಭವಾಗಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ಸಂವಿಧಾನದ 350 (ಬಿ) ಅನುಚ್ಛೇದವು ಭಾಷಾ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರಕ್ಕೆ ಭಾಷಾ ನಿರ್ದೇಶಕರನ್ನು ನೇಮಿಸುವ ಅಧಿಕಾರವನ್ನು ನೀಡಿದ್ದು, ಹಿಂದಿಯೇತರ ರಾಜ್ಯಗಳ ಪರಸ್ಪರ ಭಿನ್ನಾಭಿಪ್ರಾಯಗಳು ಈ ಸಂಘಟಿತ ಹೋರಾಟಕ್ಕೆ ಅಡ್ಡಿಯಾಗಿರುವ ಕಾರಣ ಅಭಿಪ್ರಾಯ ಭೇದವನ್ನು ತೊಡೆದು ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳು ಒಗ್ಗೂಡಿ ಭಾಷಾ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸರ್ಕಾರವನ್ನು ಆಗ್ರಹಿಸಬೇಕಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಈ ಕುರಿತಂತೆ ಮೊದಲ ಹೆಜ್ಜೆಯನ್ನು ಇಡುವುದು ಸಕಾಲಿಕ ನಿಲುವಾಗಲಿದೆ ಎಂದಿರುವ ಡಾ.ಬಿಳಿಮಲೆ, ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಭಾಷಾ ನಿರ್ದೇಶನಾಲಯವನ್ನು ಸ್ಥಾಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ಇದು ನೆರೆ ರಾಜ್ಯಗಳ ಹಾಗೂ ಕರ್ನಾಟಕದಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರುಗಳ ಸಂವಿಧಾನಿಕ ಹಕ್ಕುಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು