9:36 AM Friday10 - January 2025
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಪಿಡಿಓ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬ; ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ನೇಮಕ: ಸಿಎಂ

12/12/2024, 22:35

ಬೆಳಗಾವಿ(reporterkarnataka.com): ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು