11:36 PM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಸೈನ್ಸ್ ವಿಡಿಯೋ ಹೆಸರಿನಲ್ಲಿ ನೀರಿನೊಳಗೆ ಬ್ಲಾಸ್ಟ್: ಬಿಗ್​ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್

13/12/2024, 11:22

ತುಮಕೂರು(reporterkarnataka.com): ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದ ಡ್ರೋನ್ ಪ್ರತಾಪ್ ಅವರನ್ನು ಮತ್ತೆ ಬಂಧಿಸಲಾಗಿದೆ. ಹೊಸ ಪ್ರಕರಣವೊಂದರಲ್ಲಿ ಪೊಲೀಸರು ಪ್ರತಾಪ್ ಅವರನ್ನು ಕಂಬಿ ಹಿಂದೆ ಹಾಕಿದ್ದಾರೆ.
ಸೈನ್ಸ್ ವಿಡಿಯೋ ಹೆಸರಿನಲ್ಲಿ ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್​ ಅವರನ್ನು ಪೊಲೀಸರು ಈ ಸಲ ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್​ ಅವರನ್ನು ದಸ್ತಗಿರಿ ಮಾಡಿದ್ದಾರೆ.
ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಸ್ಫೋಟ ಆಗಿದೆ, ಬೆಂಕಿ ಸಹ ಚಿಮ್ಮಿದೆ.
ಬಾಂಬ್ ಸ್ಫೋಟಗೊಂಡ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ತೋರಿಸಿ ಪ್ರತಾಪ್‌ ಬಿಲ್ಡಪ್ ಬೇರೆ ಕೊಟ್ಟಿದ್ದರು. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್‌ ಕೂಗಿದ್ದರು. ಈ ವಿಡಿಯೋ ವೈರಲ್ ಆಗಿ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.
ಈ ರೀತಿ ಬ್ಲಾಸ್ಟ್ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿತ್ತು. ಯಾವೆಲ್ಲ ಕೆಮಿಕಲ್ ಹಾಕಿದರೆ ಬ್ಲಾಸ್ಟ್ ಆಗುತ್ತೆ ಎಂದು ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸರವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು.
ಈ ಸಂಬಂಧ ಮಿಡಿಗೇಶಿ ಪೊಲೀಸರು ಬಿಎನ್ ಎಸ್ ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು