1:07 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ: ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

13/12/2024, 14:28

ಬೆಳಗಾವಿ(reporterkarnataka.com): ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಶುಕ್ರವಾರ ವಿಧಾನ ಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.
ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.
ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು