11:06 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಎಚ್.ಎಲ್ ನಾಗರಾಜ್ ನೇಮಕ

13/12/2024, 21:08

*ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಘೋಷಣೆ*

ಬೆಂಗಳೂರು(reporterkarnataka.com): ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ, 49ರ ಹರೆಯದ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಿಸಲಾಗಿದ್ದು, ಶನಿವಾರ ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.
ಶುಕ್ರವಾರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ ಸ್ವಾಮೀಜಿ, ನನಗೆ ಈಗ 81 ವರ್ಷ ಆಗಿದೆ. ಹೀಗಾಗಿ, ನಮ್ಮ ಮಠದೊಂದಿಗೆ ಅನೇಕ ವರ್ಷಗಳಿಂದ ಸಂಪರ್ಕದಲ್ಲಿರುವ, ಸೇವಾ ಕಾರ್ಯಗಳನ್ನು ಮಾಡತ್ತಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಲ್.ನಾಗರಾಜ್ ಅವರನ್ನು ಉತ್ತರಾಧಿಕಾರಿಯಾಗಿ ಭಗವಂತನ ಇಚ್ಛೆಯಂತೆ ಆಯ್ಕೆ ಮಾಡಲಾಗಿದೆ. ಈ ಆಯ್ಕೆಗೆ ಮಠದ ಟ್ರಸ್ಟ್‌ನ ಎಲ್ಲಾ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಮಠದ ಉತ್ತರಾಧಿಕಾರಿಯಾಗಿ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಗಳನ್ನು ‘ನಾಥ’ ಪರಂಪರೆಯಂತೆ ನಡೆಸಿಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು.
ಶನಿವಾರ (ಡಿ.14) ಸಂಜೆ ಆರಂಭವಾಗುವ ವಿಧಿ ವಿಧಾನಗಳು, ಕಾರ್ಯಕ್ರಮಗಳು ಭಾನುವಾರ ಸಂಜೆವರೆಗೂ ಜರುಗಲಿವೆ. ಹತ್ತು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ನಿಡುಮಾಮಿಡಿ ಜಗದ್ಗುರು ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಮಠಗಳ ಪೀಠಾಧ್ಯಕ್ಷರ
ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ನೀಡಿ ಉತ್ತರಾಧಿಕಾರಿಯಾಗಿ ನೇಮಿಸಲಾಗುತ್ತದೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು.
ಧಾರ್ಮಿಕತೆ ಮತ್ತು ಸಮಾಜ ಸೇವಾ ಮನೋಭಾವ ಹೊಂದಿದ್ದ ನಾಗರಾಜ್ ಅವರು ಅವಿವಾಹಿತರಾಗಿಯೇ ಇದ್ದಾರೆ. ಅವರು ಶನಿವಾರದಿಂದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಮಹಾಸ್ವಾಮೀಜಿಯಾಗಿ ಮಠದ ಕಾರ್ಯಗಳು, ಶ್ರೀಮಠದ ಶಿಕ್ಷಣ ಸಂಸ್ಥೆಗಳನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ಸೇವಾ ಕಾರ್ಯಗಳನ್ನು ಇನ್ನಷ್ಟು ವಿಸ್ತರಿಸಿಕೊಂಡು ಹೋಗುತ್ತಾರೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಠದ ಟ್ರಸ್ಟಿಗಳಾದ ದೊಡ್ಡಮನೆ ವೆಂಕಟೇಶ, ಆಡಿಟರ್ ನಾಗರಾಜ್, ಪಂಚಲಿಂಗಯ್ಯ, ಶಿವಲಿಂಗಯ್ಯ, ಮಾರಪ್ಪಣ್ಣ, ವಕೀಲರಾದ ಸಿದ್ದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
*ಉತ್ತರಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರ ಹಿನ್ನೆಲೆ*
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೆನಹಳ್ಳಿ ಗ್ರಾಮದ ಲಿಂಗಯ್ಯ ಮತ್ತು ಗಂಗಮ್ಮನವರ ಸುಪುತ್ರರಾಗಿರುವ ಎಚ್.ಎಲ್.ನಾಗರಾಜ್ ಅವರು ಬಾಲ್ಯದ ಪ್ರಾಥಮಿಕ ಶಿಕ್ಷಣವನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮುಗಿಸಿದ್ದಾರೆ. ನಂತರ ಪದವಿ ಮುಗಿಸಿ, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಮೈಕ್ರೋಫೈನಾನ್ಸ್‌ನಲ್ಲಿ ಸಂಶೋಧನೆ (ಪಿಎಚ್‌ಡಿ) ಮಾಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುವಾಗಿನಿಂದಲೂ ನಾಗರಾಜ್ ಅವರಿಗೆ ಧಾರ್ಮಿಕ ಕಾರ್ಯಗಳ ಕುರಿತು ಆಸಕ್ತಿ ಬೆಳೆದಿತ್ತು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಆದರ್ಶವಾಗಿ ತೆಗೆದುಕೊಂಡಿದ್ದರು. ಶಿಕ್ಷಣ ಮುಂದುವರೆಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಾಗ ಅವರು ಆದಿಚುಂಚನಗಿರಿ ಮಠದ ಹಾಸ್ಟೇಲ್‌ನಲ್ಲಿ ಉಳಿದುಕೊಂಡಿದ್ದರು. ಈ ಅವಧಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸೇವಾ ಕಾರ್ಯಗಳಿಂದ ಪ್ರಭಾವಿತರಾದರು. ಸನ್ಯಾಸತ್ವ ಮತ್ತು ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇವಾ ಕಾರ್ಯ ಮಾಡಬೇಕು ಎನ್ನುವ ಮನಸ್ಸು ಮಾಡಿದರು.
ತಹಸೀಲ್ದಾರ್ ಆಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಮೈಶುಗರ್ ಕಾರ್ಖಾನೆಯ ಎಂ.ಡಿ. ಆಗಿ ಕೆಲಸ ಮಾಡಿರುವ ನಾಗರಾಜ್ ಅವರ ಪ್ರಾಮಾಣಿಕತೆ, ದಕ್ಷತೆ ಮತ್ತು ಜನಸೇವಾ ಮನೋಭಾವವನ್ನು ರೂಢಿಸಿಕೊಂಡಿದ್ದಾರೆ ಎಂದು ಮಠದ ಟ್ರಸ್ಟಿಗಳು ಉತ್ತರಾಧಿಕಾರಿಯವರ ಕುರಿತಾದ ಹಿನ್ನೆಲೆ ಹಂಚಿಕೊಂಡರು.
ಮಾಧ್ಯಮ ಸಂಪರ್ಕಕ್ಕಾಗಿ
ಮಂಜುನಾಥ್
9980765001

ಇತ್ತೀಚಿನ ಸುದ್ದಿ

ಜಾಹೀರಾತು