10:54 AM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು