6:09 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಕದ್ರಿಪಾರ್ಕ್‌ನಲ್ಲಿ ನಾಳೆ ಮತ್ತೆ ಬೃಹತ್ ವೈನ್ ಮೇಳ: ಹೊಸ ಹೊಸ ಪಾನೀಯಗಳ ಪ್ರದರ್ಶನ

14/12/2024, 00:26

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.
ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಬೆಳಗ್ಗೆ 10.30ರಿಂದ ರಾತ್ರಿ 9.30 ಗಂಟೆ ತನಕ ವೈನ್ ಮೇಳ ನಡೆಯಲಿದೆ.
ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲಾ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಿ ಪರಿಚಯಿಸುವ ಹಾಗೂ ದ್ರಾಕ್ಷಾ ರಸದ (ವೈನ್ ) ರುಚಿಯನ್ನು ಸವಿದು ಬೇಕಾದ ರೀತಿಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮೇಳ ಏರ್ಪಡಿಸಲಾಗಿದೆ.
ಮೇಳದಲ್ಲಿ ಟ್ರಾೃಕ್ ಮ್ಯೂಸಿಕ್ ಏರ್ಪಡಿಸಲಾಗಿದೆ. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕುಟುಂಬ ಸಮೇತರಾಗಿ ಬಂದು ರಜಾ ದಿನವನ್ನು ಇಲ್ಲಿ ಕಳೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು