3:44 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳವಾದ್ಯದೊಂದಿಗೆ ಸಾಂಸ್ಕೃತಿಕ ರಥ ಸ್ವಸ್ಥಾನಾಗಮನ: ಆಳ್ವಾಸ್ ವಿರಾಸತ್‌ ಗೆ ವೈಭವದ ತೆರೆ

15/12/2024, 10:09

ವಿದ್ಯಾಗಿರಿಮೂಡುಬಿದಿರೆ(reporterkarnataka.com): ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವಿರಾಸತ್‌’ ನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.


ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು.
ಇದಕ್ಕೂ ಮೊದಲು ಸಣ್ಣ ರಥದಲ್ಲಿ ಗಣಪತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ಧ್ಯೋತಕವಾದ ಮಹಾಲಕ್ಷ್ಮಿ ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಮೂರ್ತಿಗಳನ್ನು ಕರೆ ತರಲಾಯಿತು.
ರಥಯಾತ್ರೆಯಲ್ಲಿ ಮೈಸೂರು, ಪಂಡರಾಪುರ ಹಾಗೂ ಮಂಗಳೂರು ಹರೇಕೃಷ್ಣ ಪಂಥದ ಭಜನಾ ತಂಡಗಳ ಭಜನೆ ಹಾಡಿನ ಮೂಲಕ ಭಕ್ತಿ ಪ್ರಭಾವಳಿ ಮೂಡಿಸಿದರು. ಅರ್ಚಕರು ಮಂತ್ರ ಘೋಷ ಮಾಡಿದರು. ತಟ್ಟಿರಾಯ, ಅಪ್ಸರೆಯರು, ಕಳಶ ಹಿಡಿದ ಯುವತಿಯರು, ಹುಲಿರಾಯ, ಕೊಂಬು, ಕಹಳೆ ನಾದ ಮೊಳಗಿದವು. ಛತ್ರಿ, ಬಿರುದಾವಳಿ, ಚಾಮರಗಳೊಂದಿಗೆ ದೊಂದಿಗಳು ಬೆಳಗಿದವು. ಮಂಗಳ ವಾದ್ಯ ನಿನಾದ ಮೂಡಿಸಿತು.
ಹರಿದ್ವಾರದಿಂದ ಬಂದ ವಿಪುಲ್ ಶರ್ಮಾ ನೇತೃತ್ವದ ಗಂಗಾರತಿ ತಂಡವು ಮಂತ್ರ ಘೋಷಗಳೊಂದಿಗೆ ಆರತಿ ಬೆಳಗಿದಾಗ ಶ್ರದ್ಧೆ ಭಕ್ತಿಯ ಪ್ರಜ್ವಲನವಾಯಿತು. ಭಕ್ತರು ಜಯಕಾರ ಹಾಕಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹಾಗೂ ಗಣ್ಯರು ರಥಕ್ಕೆ ಪುಷ್ಪಾರ್ಚನೆ ಮಾಡಿದರು.

*ನಾಳೆಯೂ ಮಹಾಮೇಳ:*
ಡಿಸೆಂಬರ್ 15ರಂದು ಆಳ್ವಾಸ್ ವಿರಾಸತ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹೊರತು ಪಡಿಸಿ, ಉಳಿದೆಲ್ಲವೂ ಇರಲಿವೆ. ಬೆಳಿಗ್ಗೆ 9ರಿಂದ ರಾತ್ರಿ 10 ವರೆಗೆ ತೆರೆದಿರಲಿವೆ. 7 ಮೇಳಗಳ 750ಕ್ಕೂ ಮಳಿಗೆಗಳಿವೆ. ರಜಾದಿನವನ್ನು ಕುಟುಂಬದ ಜೊತೆ ಆನಂದಿಸಲು ಸಂಪೂರ್ಣ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು