8:37 AM Friday27 - December 2024
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣಸೌಧ: ಬಾಬು ರಾಜೇಂದ್ರ ಪ್ರಸಾದ್, ನೆಹರೂ, ಆಝಾದ್, ಇಂದಿರಾ ಗಾಂಧಿ ತೈಲ ವರ್ಣಚಿತ್ರ ಇಂದು ಅನಾವರಣ

15/12/2024, 22:32

ಬೆಳಗಾವಿ(reporterkarnataka.com): ವಿಧಾನಸಭೆಯ ಸಭಾಂಗಣದಲ್ಲಿ ದೇಶದ ಪ್ರಥಮ ರಾಷ್ಟ್ರಪತಿ ಹಾಗೂ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಬಾಬು ರಾಜೇಂದ್ರ ಪ್ರಸಾದ್, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ, ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಝಾದ್ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ವರ್ಣಚಿತ್ರ ಡಿ.16ರಂದು ಅನಾವರಣಗೊಳ್ಳಲಿದೆ. ಈ ನಾಲ್ಕು ಮಹನೀಯರ ತೈಲವರ್ಣ ಚಿತ್ರಗಳನ್ನು ವಿಧಾನಸಭೆ ಸಭಾಂಗಣದಲ್ಲಿ ಅನಾವರಣ ಮಾಡುವ ಮೂಲಕ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹಜ್ಜೆಯನ್ನು ಇರಿಸಲು ಮುಂದಾಗಿದ್ದಾರೆ.
ಡಿ.16ರಂದು ಬೆಳಗ್ಗೆ 10 ಗಂಟೆಗೆ ವಿಧಾನಸಭೆ ಸ್ಪೀಕರ್
ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ದೇಶ ಕಂಡ ಈ ಮಹನೀಯರ ತೈಲ ವರ್ಣಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. ಪಾಟೀಲ್, ಬೆಳಗಾವಿ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಇತರ ಸಚಿವರು ಮತ್ತು ಶಾಸಕರು ಉಪಸ್ಥಿತರಿರಲಿದ್ದಾರೆ.
ಭಾರತದ ಮೊದಲ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ , ಮಹಾನ್ ಸಮಾಜ ಸೇವಕ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು, ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರು. 1950, ಜನವರಿ 26ರಂದು ಭಾರತವು ಗಣರಾಜ್ಯವಾದಾಗ ಸ್ವತಂತ್ರ ಭಾರತದ ಪ್ರಪ್ರಥಮ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 12 ವರ್ಷ ರಾಷ್ಟ್ರಪತಿಯಾಗಿದ್ದ ಡಾ. ಬಾಬು ರಾಜೇಂದ್ರ ಪ್ರಸಾದ್ ಆ ಸ್ಥಾನಕ್ಕೆ ಅನನ್ಯ ಗೌರವ ತಂದುಕೊಟ್ಟವರು. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರೂ ಆಗಿ ದೇಶಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
ಪಂಚ ವಾರ್ಷಿಕ ಯೋಜನೆ, ಹಸಿರು ಕ್ರಾಂತಿಯ ರುವಾರಿ ಹಾಗೂ ಆಧುನಿಕ ಭಾರತಕ್ಕೆ ಬುನಾದಿ ಹಾಕಿಕೊಟ್ಟ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದರು. ಸಂಸದೀಯ ಪ್ರಜಾಪ್ರಭುತ್ವ, ಜಾತ್ಯತೀತತೆ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ದೇಶದಲ್ಲಿ ಅಳವಡಿಸಿ ಭಾರತವನ್ನು ಆಧುನಿಕ ರಾಷ್ಟ್ರವನ್ನಾಗಿ ನಿರ್ಮಾಣ ಮಾಡುವುದರಲ್ಲಿ ಮಹತ್ವದ ಭೂಮಿಕೆಯನ್ನು ನಿರ್ವಹಿಸಿದವರು. ದೇಶದಲ್ಲಿ ಸಮಾಜವಾದ, ವೈಜ್ಞಾನಿಕ ಮನೋಭಾವದ ಅಭಿವೃದ್ದಿ, ರಾಷ್ಟ್ರೀಯ ಏಕತೆ, ಅಲಿಪ್ತ ನೀತಿ, ಕೃಷಿ ಸುಧಾರಣೆಗೆ ನೆಹರು ನಾಯಕತ್ವದ ಕೊಡುಗೆ ಅಪಾರ. ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೇರಿದಂತೆ ಶಿಕ್ಷಣ, ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದವರು ಪಂಡಿತ್ ಜವಹರಲಾಲ್ ನೆಹರು.
ಮೌಲಾನಾ ಅಬುಲ್ ಕಲಾಂ ಆಝಾದ್ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿದ್ದವರು. ಭಾರತೀಯ ಸ್ವತಂತ್ರ ಸಂಗ್ರಾಮದಲ್ಲಿ ಪ್ರಮುಖ ಭೂಮಿಕೆಯನ್ನು ನಿಭಾಯಿಸಿದ್ದ ಮೌಲಾನಾ ಆಝಾದ್, ಅಪ್ಪಟ ಜಾತ್ಯತೀತ. ಭಾರತ ವಿಭಜನೆಯನ್ನು ತೀವ್ರವಾಗಿ ಖಂಡಿಸಿದ್ದರು. ತತ್ವಶಾಸ್ತ್ರದ ಕುರಿತಾದ ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ, ಖಿಲಾಫತ್ ಚಳವಳಿಯ ನಾಯಕರಾಗಿ ಮಹಾತ್ಮಾ ಗಾಂಧಿಯೊಂದಿಗೆ ನಿಟಕ ಸಂಪರ್ಕವನ್ನು ಹೊಂದಿದ್ದರು. ತಮ್ಮ 35ನೇ ವಯಸ್ಸಿನಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಈ ಹುದ್ದೆ ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಮೌಲಾನಾ ಆಝಾದ್ ದೇಶದಲ್ಲಿ ಹಿಂದೂ- ಮುಸ್ಲಿಮ್ – ಕ್ರೈಸ್ತರ ಏಕತೆಗಾಗಿ ಶ್ರಮಿಸಿದವರು.
ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿರುವ ಇಂದಿರಾ ಗಾಂಧಿ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ದೇಶದಲ್ಲಿ ಭೂಸುಧಾರಣೆ ಕಾಯ್ದೆ, ಬ್ಯಾಂಕ್‌ಗಳ ರಾಷ್ಟ್ರೀಕರಣ, ಪಾಕಿಸ್ತಾನವನ್ನು ಇಬ್ಬಾಗ ಮಾಡಿ ಬಾಂಗ್ಲಾ ದೇಶವನ್ನು ಸೃಷ್ಟಿಸುವ ಮೂಲಕ ವಿರೋಧ ಪಕ್ಷಗಳಿಂದಲೂ ದುರ್ಗೆ ಎಂದು ಕರೆಸಿಕೊಂಡವರು. ದೇಶದ ಭದ್ರತೆಯ ದೃಷ್ಟಿಯಿಂದ 1967 ರಲ್ಲಿ ರಾಷ್ಟ್ರೀಯ ಪರಮಾಣು ಯೋಜನೆಯನ್ನು ಪ್ರಾರಂಭಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಹಸಿರು ಕ್ರಾಂತಿ, ಗರೀಬಿ ಹಟಾವೋ ಒಳಗೊಂಡಂತೆ ಬಡವರ ಪರವಾದ ನೀತಿಗಳನ್ನು ಜಾರಿಗೆ ತರುವ ಮೂಲಕ ಜನಪ್ರಿಯ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದವರು.
ಇದರ ಜೊತೆಗೆ ಈಗಾಗಲೇ ಅನಾವರಣಗೊಂಡಿರುವ ಡಾ. ಬಿ. ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಹಾಗೂ ಸ್ವಾಮಿ ವಿವೇಕಾನಂದ ಅವರ ಹಳೆಯ ತೈಲ ವರ್ಣಚಿತ್ರ ಬದಲಾಯಿಸಿ ಹೊಸ ತೈಲ ವರ್ಣಚಿತ್ರ ಅಳವಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಇರುವ ತೈಲವರ್ಣ ಚಿತ್ರ ಸರಿಯಾಗಿ ಗೋಚರಿಸುತ್ತಿಲ್ಲ ಎಂಬ ಬಗ್ಗೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮೂವರು ಮಹನೀಯರ ಹೊಸ ತೈಲವರ್ಣ ಚಿತ್ರವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು