9:49 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ರಾಜ್ಯ ಪಠ್ಯಕ್ರಮದ 6ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ ಇ ಪಠ್ಯಕ್ರಮ ಅಳವಡಿಕೆ

16/12/2024, 15:58

ಬೆಳಗಾವಿ ಸುವರ್ಣಸೌಧ(reporterkarnataka.com) ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ ಇ( CBSE ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.
ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಸೋಮವಾರ ಪರಿಷತನಲ್ಲಿ ಉತ್ತರಿಸಿದರು.
ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದ್ದು, ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು