7:42 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಸುವರ್ಣ ವಿಧಾನಸೌಧದಲ್ಲಿ ರಾಷ್ಟ್ರ ನಾಯಕರ ತೈಲವರ್ಣ ಚಿತ್ರಗಳ ಅನಾವರಣ

16/12/2024, 20:10

ಬೆಳಗಾವಿ ಸುವರ್ಣಸೌಧ (reporterkarnataka.com): ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.


ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಆಧ್ಯಾತ್ಮಿಕ ಚಿಂತಕ ಸ್ವಾಮಿ ವಿವೇಕಾನಂದ ಮತ್ತು ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ.ಬಾಬು ರಾಜೇಂದ್ರ ಪ್ರಸಾದ್, ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ವರ್ಣಚಿತ್ರಗಳನ್ನು ವಿಧಾನ ಸಭೆಯ ಅಧಿಕಾರಿಗಳ ಗ್ಯಾಲರಿ ಹಾಗೂ ಪರ್ತಕತ್ರ ಗ್ಯಾಲರಿ ಮೇಲ್ಬಾಗ ಅಳವಡಿಸಲಾಗಿದೆ.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷರು ತಮ್ಮ ವಿವೇಚನೆ ಬಳಿಸಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಸಮಾಜ ಸುಧಾರಣೆ ಕೈಗೊಂಡ ಮಹಿನೀಯರು,ರಾಷ್ಟ್ರ ನಾಯಕರ ವರ್ಣಚಿತ್ರಗಳನ್ನು ವಿಧಾನ ಸಭೆಯಲ್ಲಿ ಅಳವಡಿಸಿದ್ದು, ಇದಕ್ಕೆ ಯಾರ ವಿರೋಧವು ಇಲ್ಲ ಎಂದು ಹೇಳಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ನಿಜವಾದ ಭಾರತೀಯರಾದವರಿಗೆ ಈ ಮಹನೀಯರ ಪರಿಚಯ ಮಾಡಿಕೊಡವು ಅಗತ್ಯವಿಲ್ಲ. ಇತಿಹಾಸ ಓದಿದ ಎಲ್ಲರಿಗೂ ಇವರ ಬಗ್ಗೆ ತಿಳಿದೇ ಇರುತ್ತದೆ ಎಂದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವರ್ಣಚಿತ್ರ ಅಳವಡಿಸಿದ ಎಲ್ಲ ಮಹನೀಯರ ಬಗ್ಗೆ ಗೌರವವಿದೆ. ದೇಶಕ್ಕೆ ಅವರ ಕೊಡುಗೆ ಅಪಾರ ಎಂದರು.
ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಅಪ್ರತಿಮ ದೇಶ ಸೇವೆ, ಸಮಾಜ ಸೇವೆ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರಾಗಿ ಸಲ್ಲಿಸಿ ದಿವಂಗತರಾದವರ ವರ್ಣಚಿತ್ರಗಳನ್ನು ವಿಧಾನ ಸಭೆಯಲ್ಲಿ ಅಳವಡಿಸಲಾಗಿದೆ. ಕೆಲವು ಸದಸ್ಯರು ಬಸವಣ್ಣನವರ ವರ್ಣಚಿತ್ರ ಬದಲಾಯಿಸುವಂತೆ 3 ದಿನಗಳ ಹಿಂದೆ ತಿಳಿಸಿದ್ದಾರೆ. ಈ ಕುರಿತು ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ದೇಶದಲ್ಲಿ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿ, ಉಗ್ರರ ಕೈಯಿಂದ ಹತರಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ವರ್ಣಚಿತ್ರವನ್ನು ವಿಧಾನ ಸಭೆಯಲ್ಲಿ ಅಳವಡಿಸುವ ಇಂಗಿತವನ್ನು ಸಭಾಧ್ಯಕ್ಷ ಯು.ಟಿ.ಖಾದರ್ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ಕೆಲ ಶಾಸಕರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ವರ್ಣಚಿತ್ರವನ್ನು ಅಳವಡಿಸುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇತರೆ ಸಚಿವರುಗಳು ಹಾಗೂ ವಿಧಾನ ಸಭೆಯ ಸದಸ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು