1:22 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಒಳ ಮೀಸಲಾತಿ ಜಾರಿ; ನಮ್ಮ ಸರಕಾರವು ನುಡಿದಂತೆ ನಡೆಯಲಿದೆ: ಸಚಿವ ಡಾ.ಎಚ್. ಸಿ. ಮಹದೇವಪ್ಪ

16/12/2024, 22:06

ಬೆಳಗಾವಿ(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಬಳಿ ಮಾದಿಗ ದಂಡೋರ ಸಮಿತಿಯಿಂದ ಜರುಗುತ್ತಿರುವ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಪಾಲ್ಗೊಂಡು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದೆ.
ಇದೇ ವೇಳೆ ಪರಿಶಿಷ್ಟ ಸಮುದಾಯಗಳು ತಮ್ಮನ್ನು ಮಾದಿಗ ಮತ್ತು ಹೊಲೆಯ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಲು ವಿನಂತಿಸಿದೆ.
ಒಳ ಮೀಸಲಾತಿ ಜಾರಿಗೆ ನಮ್ಮ ಸಿದ್ದರಾಮಯ್ಯ ಸರ್ಕಾರವು ಬದ್ಧವಾಗಿದ್ದು ಈಗಾಗಲೇ ಅದನ್ನು ಸ್ಪಷ್ಟವಾಗಿ ಘೋಷಿಸಿದೆ. ಆದರೆ ಬಿಜೆಪಿ ಪಕ್ಷದ ನಾಯಕರು ಇದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದು ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಯಾವುದೇ ಪ್ರಯೋಜನ ಇಲ್ಲ.
ಜನರನ್ನು ಮೆಚ್ಚಿಸಲು ಹಳೆಯ ವರದಿ ಮತ್ತು 2011 ರ ಜನಗಣತಿಯ ದತ್ತಾಂಶ ತೆಗೆದುಕೊಂಡು ಮೀಸಲಾತಿ ಕೊಡಿ ಎಂದು ಸಲಹೆ ಕೊಡುತ್ತಿರುವ ಬಿಜೆಪಿಗರಿಗೆ 2011ರಿಂದ 2024ರ ಅವಧಿಯ ಒಳಗೆ ಪರಿಶಿಷ್ಟ ಸಮುದಾಯಗಳ ಜನಸಂಖ್ಯೆಯಲ್ಲಿ ಏರಿಕೆಯಾಗಿದ್ದರ ಕುರಿತು ಅರಿವಿಲ್ಲ. ಸರಿ ಸುಮಾರು ಒಂದೂವರೆ ದಶಕದ ಅವಧಿಯಲ್ಲಿ ಆಗಿರುವ ಮಾರ್ಪಾಡುಗಳನ್ನು ಸೇರಿಸಿಕೊಳ್ಳದೇ ಮೀಸಲಾತಿಯನ್ನು ಜಾರಿ ಮಾಡಿದರೆ ಮುಂದೊಮ್ಮೆ ಯಾರಾದರೂ ಪ್ರಶ್ನೆ ಮಾಡಿದರೆ ಆಗ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದಲೇ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಡಾ.ಎಚ್. ಸಿ. ಮಹದೇವಪ್ಪ ನುಡಿದರು.


ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತೆ ರಾಜಕೀಯ ಅಧಿಕಾರವೇ ಶೋಷಿತರ ಅಭಿವೃದ್ಧಿಯ ಕೀಲಿಕೈ ಎಂದು ಹೇಳಿದ್ದು ಅದನ್ನು ಎಲ್ಲರೂ ಗಮನದಲ್ಲಿಟ್ಟುಕೊಂಡು ವರ್ತಿಸಬೇಕು. ದೇಶಾದ್ಯಂತ ಅತಿ ಶೋಷಿತ ಸಮುದಾಯಗಳನ್ನು ಗುರುತಿಸಿ ಅವುಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಆಲೋಚಿಸಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಪಕ್ಷವು ವಿವರವಾಗಿ ಚರ್ಚಿಸಲಿದೆ.
ಒಳ ಮೀಸಲಾತಿಯನ್ನು ಸೂಕ್ತ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿದ್ದು ಚುನಾವಣಾ ಪ್ರಣಾಳಿಕೆಯಲ್ಲಿ ತಾನು ನುಡಿದಂತೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು