ಇತ್ತೀಚಿನ ಸುದ್ದಿ
ಬೆಳಗಾವಿ ಅಧಿವೇಶನ: ಬಂದೋಬಸ್ತ್ ಕಾರ್ಯಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳ ಭೇಟಿ ಮಾಡಿದ ಗೃಹ ಸಚಿವ ಡಾ. ಪರಮೇಶ್ವರ್
16/12/2024, 22:55
ಬೆಳಗಾವಿ(reporterkarnataka.com): ಬೆಳಗಾವಿ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಘಟಕಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಆಗಮಿಸಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಲ್ಪಿಸಿರುವ ವಸತಿ ಮತ್ತು ಊಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ಬಳಿಕ ಸಿಬ್ಬಂದಿಗಳಿಗೆ ಸ್ವತಃ ಗೃಹ ಸಚಿವರೇ ಊಟ ಬಡಿಸಿದರು. ಪೊಲೀಸ್ ಸಿಬ್ಬಂದಿಗಳ ಜತೆ ಕುಶಲೋಪರಿ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಎಡಿಜಿಪಿ ಆರ್.ಹಿತೇಂದ್ರ, ಐಜಿಪಿ ಸಂದೀಪ್ ಪಾಟೀಲ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಮಾರ್ಟಿನ್ ಮಾರ್ಬನ್ಯಾಂಗ್, ಎಸ್‌ಪಿ ಸಂಜೀವ್ ಪಾಟೀಲ್ ಮುಂತಾದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.