12:10 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ 20 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಂಕುಸ್ಥಾಪನೆ

17/12/2024, 19:38

* *20 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ*
* *4 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಬಾಲಭವನ*

ಬೆಳಗಾವಿ(reporterkarnataka.com): ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಬಾಲ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಬೆಳಗಾವಿ ಎರಡನೇ ರಾಜಧಾನಿ ಮಟ್ಟಕ್ಕೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ನಡೆಯಬೇಕು, ಮೂಲಭೂತ ಸೌಲಭ್ಯಗಳು ಕೂಡ ನಿರ್ಮಾಣವಾಗಬೇಕು.
ನಮ್ಮ ಇಲಾಖೆಯಿಂದ ಜಿಲ್ಲೆಗೆ ಅನೇಕ ಯೊಜನೆಗಳನ್ನು ತರಲಾಗುತ್ತಿದೆ. ಇಷ್ಟೊಂದು ದೊಡ್ಡ ಜಿಲ್ಲೆಗೆ ಈವರೆಗೂ ಒಂದು ಸುಸಜ್ಜಿತ ಭಾಲಭವನ ಇಲ್ಲ, ನಮ್ಮ ಇಲಾಖೆಗೆ ಸುಸಜ್ಜಿತ ಕಟ್ಟಡ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ನಗರದ ಮಧ್ಯದಲ್ಲಿಯೇ 4 ಎಕರೆ ಈ ವಿಶಾಲ ಜಾಗವನ್ನು ಗುರುತಿಸಿ ಬಾಲಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈ ಜಾಗದ ಮಾರುಕಟ್ಟೆ ಮೌಲ್ಯ100 ಕೋಟಿಗೂ ಅಧಿಕ. ಇದರ ಜೊತೆಗೆ, ನಮ್ಮ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಸಹ ನಿರ್ಧರಿಸಲಾಗಿದೆ, ಇದಕ್ಕೆ 6 ಕೋಟಿ ರೂ. ಮಂಜೂರಾಗಿದ್ದು, ಇಷ್ಟರಲ್ಲೇ ಹಣ ಬಿಡುಗಡೆಯಾಗಲಿದೆ. ಬಾಲಭವನಕ್ಕೆ ಈಗಾಗಲೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ, ಈಗಾಗಲೇ 2 ಕೋಟಿ ರೂ. ಬಿಡುಗಡೆ ಕೂಡ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮಕ್ಕಳಿಗಾಗಿ ರೈಲು, ಫ್ಯಾಂಟಸಿ ಪಾರ್ಕ್ ಸೇರಿದಂತೆ, ಆಟದೊಂದಿಗೆ ಕಲಿಯುವುದಕ್ಕೆ ಅವಕಾಶವಾಗುವಂತೆ ಸರ್ವವಿಧದ ಸೌಕರ್ಯಗಳನ್ನು ಬಾಲಭವನ ಒಳಗೊಳ್ಳಲಿದೆ. ಮಕ್ಕಳಿಗೆ ಕಲಿಯುವುದಕ್ಕೆ ಮತ್ತು ನಲಿಯುವುದಕ್ಕೆ ಇದೊಂದು ಅತ್ಯುತ್ತಮ ಸ್ಥಳವಾಗಬೇಕೆನ್ನುವುದೇ ನನ್ನ ಉದ್ದೇಶ ಎಂದರು.
* *ಗೃಹಲಕ್ಷ್ಮೀ ಯೋಜನೆಗೆ ಪ್ರಚಾರ ಅವಶ್ಯ*
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,
ನಮ್ಮ‌ ಸರ್ಕಾರ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಯೋಜನೆ ಯಶಸ್ವಿಯಾಗಿರುವುದು ನಮಗೆಲ್ಲ ಹೆಮ್ಮೆ ತರುವ ಸಂಗತಿಯಾಗಿದೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ ಪ್ರಚಾರದ ಅವಶ್ಯಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌
ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಲ್ಲೂ ನಮ್ಮ ಯೋಜನೆಗಳನ್ನು ಕಾಪಿ ಮಾಡಲಾಗುತ್ತಿದೆ.‌ ಇದು ಗೃಹಲಕ್ಷ್ಮೀ ಯೋಜನೆಯ ಜನಪ್ರಿಯತೆಗೆ ಸಾಕ್ಷಿ. ನಾಳೆ ಗೃಹಲಕ್ಷ್ಮೀ ಯೋಜನೆಯನ್ನು ಜನೋಪಯೋಗಿಯಾಗಿ ಮತ್ತು ಸ್ವಾವಲಂಬನೆಗಾಗಿ ಬಳಸಿದ ಮಹಿಳೆಯರನ್ನು ವಿಧಾನಸೌಧಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ. ಅವರಿಗೆಲ್ಲ ಆಡಳಿತ ಸೌಧವನ್ನು, ಆಡಳಿತ ವ್ಯವಸ್ಥೆಯನ್ನು ಹತ್ತಿರದಿಂದ ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಸಚಿವರು ಹೇಳಿದರು. ‌
* *ಕಾನೂನಿಗಿಂತ ದೊಡ್ಡವರು ಯಾರು ಇಲ್ಲ*
ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡೋಣ. ಪ್ರಚೋದನಾತ್ಮಕ ಹೋರಾಟ ಮಾಡುವುದು ಬೇಡ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಸಚಿವರು ಹೇಳಿದರು.
ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಬಾಲಭವನ ಸೊಸೈಟಿ ಅಧ್ಯಕ್ಷರಾದ ಜಿ.ಆರ್.ನಾಯ್ಡು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ, ಕಾರ್ಪೊರೇಟರ್ ಸಂದೀಪ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು