ಇತ್ತೀಚಿನ ಸುದ್ದಿ
ಬೆಳಗಾವಿ ಸುವರ್ಣ ಸೌಧ: ಕೆಲವು ಬೇಡಿಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಧರಣಿ ಪ್ರತಿಭಟನೆ
17/12/2024, 19:58
ಬೆಳಗಾವಿ(reporterkarnataka.com): ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಬೇಡಿಕೆಗಳನ್ನು ಆಗ್ರಹಿಸಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ
ಬೆಳಗಾವಿ ಸುವರ್ಣ ಸೌಧದ ಮುಂಭಾಗದ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ಧರಣಿ ಪ್ರತಿಭಟನೆ ನಡೆಯಿತು.
ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನ ಪ್ರಸ್ತುತ ಸರ್ಕಾರ ಹೊರಡಿಸಿರುವ ಕರಾಳ ಆದೇಶದ ಮಾನದಂಡಗಳನ್ನು ಸರಳೀಕರಿಸಬೇಕು, ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಲೇಬೇಕು ಹಾಗೂ ಇನ್ನಿತರ ಮೂಲ ಸೌಕರ್ಯಗಳ ಬೇಡಿಕೆಗಳನ್ನು ಈಡೇರಿಸಲೇಬೇಕು ಎಂದು ಸರ್ಕಾರದ ಪ್ರತಿನಿಧಿಯಾಗಿ ಮನವಿ ಸ್ವೀಕರಿಸಲು ಬಂದಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರಿಗೆ ಕನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ವಿವಿಧ ಜಿಲ್ಲಾ ತಾಲೂಕುಗಳ ಅಧ್ಯಕ್ಷರು ಸದಸ್ಯರುಗಳೆಲ್ಲಾ ಸೇರಿ ಒಂದು ತಿಂಗಳ ಗಡುವು ನೀಡಿ ಮನವಿ ಸಲ್ಲಿಸಿದರು.