ಇತ್ತೀಚಿನ ಸುದ್ದಿ
ಗಾಂಧಿ ಭಾರತ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ: ಸಿಎಂ, ಡಿಸಿಎಂ, ಎಐಸಿಸಿ ಉಸ್ತುವಾರಿ ಭಾಗಿ
17/12/2024, 20:11
ಬೆಳಗಾವಿ(reporterkarnataka.com): ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಹಿರಿಯ ಮುಖಂಡರಾದ ಅಜಯ್ ಮಕೇನ್, ಆರ್.ವಿ.ದೇಶಪಾಂಡೆ, ಸಚಿವರಾದ ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.