ಇತ್ತೀಚಿನ ಸುದ್ದಿ
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಅಹೋರಾತ್ರಿ ಪ್ರತಿಭಟನೆ
17/12/2024, 20:16
ಗಣೇಶ್ ಇನಾಂದಾರ ಬಳ್ಳಾರಿ
info.reporterkarnataka@gmsil.com
ವಿಧಾನಸಭೆ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಅಹೋರಾತ್ರಿ ಪ್ರತಿಭಟನೆ ನಡೆಸಿತು.
ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ, ಶಿಕ್ಷಣ ಸಂವಿಧಾನಬದ್ಧ ಕರ್ತವ್ಯಗಳಿವೆ. 2013ರ ಆಹಾರ ಭದ್ರತಾ ಕಾಯ್ದೆ, 2009 ರ ಕಡ್ಡಾಯ ಶಿಕ್ಷಣ ಕಾಯ್ದೆ ಕರ್ತವ್ಯಗಳನ್ನು ಶಾಸನಬದ್ದವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್‌ಗಳು ಇವರನ್ನು 3 ಮತ್ತು 4ನೇ ಗ್ರೇಡ್ ನ ನೌಕರರನ್ನಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದು ತೀರ್ಪು ನೀಡಿದೆ. ಸುಪ್ರೀಂಕೋರ್ಟ್ 1972 ಗ್ರಾಚ್ಯುಟಿ ಪಾವತಿ ಕಾಯ್ದೆಯಡಿ ಅರ್ಹರೆಂದು ತೀರ್ಪು ನೀಡಿದೆ.
ದೇಶದ ಅಭಿವೃದ್ಧಿಗೆ ಪೂರಕವಾದ ಮಾನವ ಸಂಪನ್ಮೂಲಗಳನ್ನು ಅಪೌಷ್ಟಿಕತೆ ಅಂಗ ವೈಕಲ್ಯತೆಗಳನ್ನು ಕಾಪಾಡಿ ಮಾನಸಿಕ ಮತ್ತು ದೈಹಿಕವಾಗಿ ಬೆಳೆಸಿ ಮಾನವ ಸಮಾಜದ ಪುನರುತ್ಪಾದನೆಗೆ ಕೊಡುಗೆ ಕೊಡುತ್ತಿರುವ ಐ.ಸಿ.ಡಿ.ಎಸ್. ನ್ನು ಯೋಜನೆಯನ್ನಾಗಿಯೇ 49 ವರ್ಷಗಳ ನಂತರವೂ ಉಳಿಸಿಕೊಳ್ಳಲಾಗಿದೆ. 2014ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ ನೀತಿ ಆಯೋಗದ ಶಿಫಾರಸ್ಸುಗಳಂತೆ 60:40 ಅನುಪಾತದ ಆಧಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಾಬ್ದಾರಿಯಿಂದ ನುಣಿಚಿಕೊಂಡು ಬಜೆಟ್ ಅನುದಾನಗಳನ್ನು ನಿರಂತರವಾಗಿ ಕಡಿಮೆ ಮಾಡುತ್ತಿದೆ. ಅಂಗನವಾಡಿ ಮಕ್ಕಳಿಗೆ ಕೊಡುವ ಪೌಷ್ಟಿಕ ಆಹಾರದ ಘಟಕ ವೆಚ್ಚ 2018 ರಿಂದ ಹೆಚ್ಚಳಮಾಡದೇ ಜಿ.ಎಸ್.ಟಿಯನ್ನು ಹಾಕಿದ್ದರಿಂದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಕೊಡುವುದರಲ್ಲಿ ವೈಫಲ್ಯತೆ ಎದ್ದುಕಾಣುತ್ತಿದೆ. ಮತ್ತು ಅಂಗನವಾಗಿ ನೌಕರರ ವೇತನವನ್ನು ಕೂಡ ಹೆಚ್ಚಳ ಮಾಡದೇ ಹೊಸ ಆಕರ್ಷಕ ಘೋಷಣೆಗಳಿಗೆ ಮಾತ್ರವೇ ಸೀಮಿತವಾಗುತ್ತಿದೆ.
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳನ್ನಾಗಿ ಪರಿವರ್ತಿಸಲು ತೀರ್ಮಾನಿಸಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ ಆದರೆ ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆಗೊಳಿಸಿ ಇದರ ಮೇಲ್ವಿಚಾರಣೆಗೆ ಐ.ಸಿ.ಡಿ.ಎಸ್. ಪ್ರತ್ಯೇಕ ನಿರ್ಧೇಶನಾಲಯ ಮಾಡಿದರೆ ಮಾತ್ರವೇ ಈ ತೀರ್ಮಾನಗಳನ್ನು ಪುಷ್ಟಿಕರಿಸಿದಂತಾಗುತ್ತದೆ.
1948ರ ಕನಿಷ್ಟ ವೇತನ ಕಾಯ್ದೆ ಅಡಿಯಲ್ಲಿ ತಿಳಿಸಿದಂತೆ 4 ಗಂಟೆಗಿಂತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಟ ವೇತನ ನೀಡಬೇಕೆಂದು ತಿಳಿಸಿದೆ. ಆದರೆ ಯಾವುದೇ ಸರ್ಕಾರಗಳು ಇದನ್ನು ಜಾರಿಮಾಡಲು ಮುಂದಾಗಲಿಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರ ಬರುವಾಗ ತನ್ನ ಪ್ರಚಾರದಲ್ಲಿ ಹೇಳಿದಂತೆ 3500 ರೂ. ಮತ್ತು 1750ರೂ. ವೇತನ ಹೆಚ್ಚಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು .
ಕೋಮುವಾದಿಗಳನ್ನು ವಿಭಜನೆಕಾರರನ್ನು ಹಿಮ್ಮೆಟ್ಟಿಸಿ ಜನರ ಸರ್ಕಾರವಾಗಿ ಬಂದಿರುವ ಸಿದ್ದರಾಮಯ್ಯನವರ ಸರ್ಕಾರ ಒಂದುವರೆ ಲಕ್ಷ ಅಂಗನವಾಡಿ ಬಡ ಮಹಿಳೆಯರ ಮತ್ತು ರಾಜ್ಯದ ಮಾನವ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಮಹಿಳೆಯರ ಬದುಕು ಹಸನಾಗಲು ಕೂಡಲೇ ಕಾರ್ಯ ಪ್ರವೃತ್ತರಾಗಬೇಕೆಂದು ಆಗ್ರಹಿಸಲು ಡಿಸೆಂಬರ್ 17ರಿಂದ ಜಿಲ್ಲಾ ಕೇಂದ್ರಗಳಲ್ಲಿ ಅಂಗನವಾಡಿ ಕೇಂದ್ರ ಗಳನ್ನು ಬಂದ್ ಮಾಡಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಡಿಸೆಂಬರ್ 18 ರಂದು ಬೆಳಗಾವಿ ಚಳಿಗಾಲದ ವಿಧಾನಸಭೆ ಅಧಿವೇಶನದ ಬಳಿ ಅಹೋರಾತ್ರಿ ಪ್ರತಿಭಟನೆ ಮಾಡಲಾಗುತ್ತದೆ. ಅಧಿವೇಶನದಲ್ಲಿ ಅಂಗನವಾಡಿ ನೌಕರರ ಬಗ್ಗೆ ಚರ್ಚೆ ಮಾಡಬೇಕು ಮತ್ತು ಕೆಳಕಂಡ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತೇವೆ.
ಬೇಡಿಕೆಗಳು :1. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆ-ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು
2. ಮ.ಮ.ಇ. 14 ಐ.ಸಿ.ಡಿ. 2023 ರ ಆದೇಶ ಪ್ರಕಾರ ಕೂಡಲೇ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿ ಮತ್ತು ಎಲ್ಲರಿಗೂ ಅನ್ವಯಿಸಿ,
3. 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರವು 26,000-00 ಗಳಿಗೆ ಗೌರವಧನ ಹೆಚ್ಚಿಸಬೇಕು
4. 2023 ರ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15000-00 ಗಳಿಗೆ ಗೌರವಧನ ಹೆಚ್ಚಿಸಬೇಕು 5. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು ಹಾಗೂ ರೂ.10,000-00 ಮಾಸಿಕ ಪಿಂಚಣಿಯನ್ನು ನೀಡಬೇಕು
6. ಶಿಕ್ಷಣ ಇಲಾಖೆ ಮತ್ತು ಎಸ್.ಡಿ.ಎಂ.ಸಿ.ಗಳಿಂದ ಪ್ರಾರಂಭಮಾಡಿರುವ ಎಲ್.ಕೆ.ಜಿ./ಯು.ಕೆ.ಜಿ.ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ./ಯು.ಕೆ.ಜಿ.ಗಳನ್ನು ಪ್ರಾರಂಬಿಸಬೇಕು
7. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ಧೇಶನಾಲಯ ಬೇಕು
8. ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ, ವಿಧಾನ ಸಭೆ, ಲೋಕಸಭೆ ಚುನಾವಣೆಗಳಲ್ಲದೇ ಉಪ ಚುನಾವಣೆಗಳಲ್ಲಿ ಮತದಾರರನ್ನು ಗುರುತಿಸುವುದು, ಅನರ್ಹಗೊಳಿಸುವುದು ಚುನಾವಣೆ ಸಂದರ್ಭದಲ್ಲಿ ಚೀಟಿ ಹಂಚುವುದು ಬೂತ್‌ಗಳಲ್ಲಿ ಕೆಲಸ ಮಾಡುವುದು ಮುಂತಾನ ಕೆಲಸಗಳಿಂದ ಅಂಗನವಾಡಿ ಕೇಂದ್ರದ ದಿನ ನಿತ್ಯದ ಕೆಲಸಗಳಲ್ಲಿ ಅಂಗನವಾಡಿ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಚುನಾವಣೆ (ಬಿ.ಎಲ್.ಓ.) ಕೆಲಸದಿಂದ ಮುಕ್ತಿಗೊಳಿಸಬೇಕು
9. ಮಾನ್ಯ ಇಲಾಖೆಯ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ
ಜಾರಿಗೊಳಿಸಬೇಕು
10.ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು.
11. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು.
12. ಖಾಲಿಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು
13.ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು ಇಲ್ಲದಿದ್ದಲ್ಲಿ ತತ್ಕಾಲಿಕ
14. ಖಾಲಿ ಇರುವ ಮತ್ತು ಹೊಸ ಕೇಂದ್ರಗಳಿಗೆ ಸರ್ಕಾರದ ಆದೇಶದಂತೆ ಮುಂಬಡ್ತಿ ವರ್ಗಾವಣೆಗಳನ್ನು ನೀಡಿ ನಂತರ ಹೊಸ ಆಯ್ಕೆ ಮಾಡಬೇಕು. ರಾಜಕೀಯ ಒತ್ತಡಕ್ಕೆ ಮಣಿದು ಅವಕಾಶದಿಂದ ವಂಚಿಸಬಾರದು
15. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು
16. ಮುಂಗಡವಾಗಿ ಕರೆಹಣ, ಕೋಳಿಮೊಟ್ಟೆ ಹಣ, ಬಾಡಿಗೆ, ಗ್ಯಾಸ್, ತರಕಾರಿ ಕಾಂಟಿಜೆನ್ಸ್ ಬಿಲ್ಲುಗಳನ್ನು ಹಾಕದೇ ಪಲಿತಾಂಶ ಕೇಳಬಾರದು
17.ಅಂಗನವಾಡಿ ಕೇಂದ್ರ ಚಟುವಟಿಕೆಗಳನ್ನು ಮೋಬೈಲ್‌ನಲ್ಲಿ ದಾಖಲೆ ನಿರ್ವಹಣೆ ಮಾಡಿದರೆ ಪುಸ್ತಕದಲ್ಲಿ ಬರೆಯುವುದನ್ನು ನಿಲ್ಲಿಸಬೇಕು
18.ಪೋಷಣಾ ಟ್ರಾಕರ್‌ನಲ್ಲಿರುವ ಫೇಸ್‌ವ್ಯಾಲ್ಯು ಹಾಕಬೇಕಾದರೆ ತಾಂತ್ರಿಕ ಮತ್ತು ಪ್ರಾಯೋಗಿಕ ಸಮಸ್ಯೆಗಳನ್ನು ಬಗೆಹರಿಸಬೇಕು
19. ಇಲಾಖೆ ನಡೆಸುವ ಮಾಸಿಕ ಮತ್ತು ಗೌರವಧನ ಸಭೆಗಳಲ್ಲಿ ಅಂಗನವಾಡಿ ನೌಕರರಿಗೆ ಕುರ್ಚಿ ವ್ಯವಸ್ಥೆ ಮಾಡಬೇಕು 20.ಪೌಷ್ಟಿಕ ಮತ್ತು ಪೂರ್ವಪ್ರಾಥಮಿಕ ಶಿಕ್ಷಣ ಹಕ್ಕಾಗಬೇಕು, ಐ.ಸಿ.ಡಿ.ಎಸ್. ಯೋಜನೆಯನ್ನು ಕಾಯ್ದೆಯನ್ನಾಗಿ ರೂಪಿಸಬೇಕು.