8:23 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ: ಶ್ರದ್ಧಾಭಕ್ತಿಯಿಂದ ನಡೆದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆ

18/12/2024, 14:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmsil.com

ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವ ದ ಅಂಗವಾಗಿ ಎರಡನೇ ದಿನವಾದ ಮಂಗಳವಾರ ರಾತ್ರಿ ದೇವಾಲಯದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಶ್ರೀ ಕ್ಷೇತ್ರ ಶಬರಿಮಲೆ ಮಾದರಿಯಲ್ಲಿಯೇ ಅಲ್ಲಿನ ಅರ್ಚಕರುಗಳಿಂದಲೇ ಪವಿತ್ರ ಪಡಿ ಪೂಜೆಯನ್ನು ನಡೆಸಲಾಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳು ಸೇರಿದಂತೆ ದೇವಾಲಯದ ಒಳ ಹಾಗು ಹೊರ ಆವರಣಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
18 ಮೆಟ್ಟಿಲುಗಳಿಗೂ 18 ಕಳಶಗಳನ್ನು ಪ್ರತಿಷ್ಠಾಪಿಸಿ ಅವುಗಳಿಗೆ ಗಂಗಾಜಲ ತುಂಬಿ ಕಳಶಗಳ ಪೂಜೆ ಮಾಡಲಾಯಿತು. ನಂತರ ಅದೇ ಗಂಗಾಜಲದಿಂದ 18 ಮೆಟ್ಟಿಲುಗಳನ್ನು ಶುದ್ದಿ ಮಾಡಿ ಮೆಟ್ಟಿಲುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಡಿ ಪೂಜೆ ಬಳಿಕ ಅಯ್ಯಪ್ಪ ಸ್ವಾಮಿ ಭಕ್ತರ ಹರ್ಷೋದ್ಗಾರದೊಂದಿಗೆ ಗುರುಸ್ವಾಮಿಗಳು ಮಹಿಳಾ ಭಕ್ತರು ಸೇರಿದಂತೆ ನೂರಾರು ಮಾಲಾದಾರಿ ಅಯ್ಯಪ್ಪ ಭಕ್ತರು ಮೆಟ್ಟಿಲುಗಳನ್ನು ಹತ್ತುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಪವಿತ್ರ 18 ಮೆಟ್ಟಿಲುಗಳನ್ನು ಹತ್ತಿ ಬಂದ ಭಕ್ತರು ಕ್ಷೇತ್ರಾಧಿಪತಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.


ಪೂಜೆ ಬಳಿಕ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಪಡಿ ಪೂಜೆ ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಮಂಡ್ಯದ ಮಹೇಶ್ ಎಂಬ ದಾನಿಗಳ ಸಹಕಾರದಿಂದ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ರಾತ್ರಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು