7:45 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಂದು ವರ್ಷ: ಪ್ರಧಾನಿ ಮೋದಿಯ ಭೇಟಿಯಾದ ವಿಜಯೇಂದ್ರ

18/12/2024, 17:24

ನವದೆಹಲಿ(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.
ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ.
ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ವಿಜಯೇಂದ್ರ ನುಡಿದರು.
ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗ ಸೂಚಿಸಿದರು. ಪ್ರಧಾನಿ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು