8:00 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

18/12/2024, 20:32

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಅವರ ಸಮಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘ ದ ಪರವಾಗಿ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಸಂಘದ ಅಧ್ಯಕ್ಷ ಎಚ್. ವಿ. ರಾಘವೇಂದ್ರ ಮತ್ತು ಹಿರಿಯ ವಕೀಲರಾದ ಎಂ.ಪಿ. ನೊರೊನ್ಹಾ ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ವನ್ನು ಜರೂರಾಗಿ ಸ್ಥಾಪಿಸುವ ಬಗ್ಗೆ ಮನವರಿಕೆ ಮಾಡಿದರು.


ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರು ಹೈಕೋರ್ಟ್ ನ್ಯಾಯಾಧೀಶ ರೊಂದಿಗೆ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುದಾಗಿ ತಿಳಿಸಿರುತ್ತಾರೆ. ನಿಯೋಗದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ವಕೀಲರದ ಮೋನಪ್ಪ ಭಂಡಾರಿ ಹಾಗೂ ಹಿರಿಯ ವಕೀಲರಾದ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ, ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಶಾಲಿನಿ, ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ. ಆರ್. ವಿಜಯ್ ಮಹಾತೇಶ್ ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು