8:05 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಎಸ್ಪಿ ಕಚೇರಿಗೆ ಆಗಮಿಸಿದ ಅಂತರ್ ಜಾತಿ ದಂಪತಿ; ಪೊಲೀಸ್ ವರಿಷ್ಠರಿಂದ ರಕ್ಷಣೆ ಭರವಸೆ

18/12/2024, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೋಷಕರ ವಿರೋಧ ನಡುವೆಯೂ ದೇವಸ್ಥಾನದಲ್ಲಿ ಮದುವೆಯಾಗಿರುವ ಆಂತರ್ ಜಾತಿ ದಂಪತಿ ಸೂಕ್ತ ರಕ್ಷಣೆ ಕೋರಿ ಎಸ್ ಪಿ ಕಚೇರಿಗೆ ಆಗಮಿಸಿದ್ದರು.

ಭದ್ರಾವತಿ ಮೂಲದ ದಲಿತ ಯುವತಿ ಶಾಲಿನಿ ಹಾಗೂ ತರೀಕೆರೆ ಮೂಲದ ಒಕ್ಕಲಿಗ ಯುವಕ ಅಜಯ್ ಅವರು
ದೇವಸ್ಥಾನದಲ್ಲಿ ಮದುವೆಯಾಗಿದ್ದರು. ತಮಗೆ ಸೂಕ್ತ ರಕ್ಷಣೆ ನೀಡುವಂತೆ ಎಸ್ ಪಿಗೆ ಮನವಿ ಮಾಡಿದ್ದಾರೆ.
ಅಂತರ್ ಜಾತಿ ವಿವಾಹಕ್ಕೆ ಯುವಕ ಹಾಗೂ ಯುವತಿ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಪೋಷಕರ ವಿರೋಧ ನಡುವೆಯೂ ಪ್ರೇಮಿಗಳು
ದೇವಸ್ಥಾನದಲ್ಲಿ ಮದುವೆಯಾಗಿದ್ದರು.
ಇಬ್ಬರೂ ಕೂಡ ವಯಸ್ಕರಾಗಿರುವ ಕಾರಣ ರಕ್ಷಣೆ ನೀಡುವ ಭರವಸೆ ನೀಡಿದ ಎಸ್ ಪಿ ನೀಡಿದ್ದಾರೆ.
ಇಬ್ಬರು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವೇಳೆಯಲ್ಲಿ ಪ್ರೀತಿಸುತ್ತಿದ್ದರು.
ಮದುವೆಗೆ ಪೋಷಕರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮತ್ತೊಮ್ಮೆ ಎಸ್ ಪಿ ಕಚೇರಿ ಆವರಣದಲ್ಲಿ ಪರಸ್ಪರ ಹೂವಿನ ಹಾರವನ್ನು ದಂಪತಿ ಬದಲಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು