9:24 PM Saturday21 - December 2024
ಬ್ರೇಕಿಂಗ್ ನ್ಯೂಸ್
ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ ಸಚಿವ ಡಾ. ಜಿ. ಪರಮೇಶ್ವರ್

19/12/2024, 13:28

ಬೆಳಗಾವಿಸುವರ್ಣಸೌಧ, (reporterkarnataka.com): ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ
ಅನಧಿಕೃತವಾಗಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಿ. ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯಕ್ಕೆ ಪದೇ ಪದೇ ಅನಧಿಕೃತವಾಗಿ ಪ್ರವೇಶಿಸುವ ಇಂತಹ ಪ್ರಕರಣಗಳ ಬಗ್ಗೆ ನಿಗಾವಹಿಸಲು ಬೆಂಗಳೂರು ನಗರದಲ್ಲಿ ನಗರ ವಿಶೇಷ ಘಟಕವಿದ್ದು, ನಗರಕ್ಕೆ ಪ್ರವೇಶಿಸುವ ಯಾವುದೇ ವಿದೇಶಿಯರ ಬಗ್ಗೆ ಪೊಲೀಸ್ ಠಾಣೆಗಳ ಮೂಲಕ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್. ಆರ್. ಆರ್. ಓ ) ಬೆಂಗಳೂರು ರವರಿಂದ ಮಾಹಿತಿಯನ್ನು ಪಡೆದು, ಪ್ರತಿ ವಿಭಾಗೀಯ ಡಿಸಿಪಿಗಳ ಮುಖಾಂತರ ವಿಶೇಷ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಅಲ್ಲದೆ, ಸಿ.ಸಿ.ಬಿಯ ಸಂಘಟಿತ ಅಪರಾಧ ದಳ ಕೂಡ ಕಾರ್ಯಾಚರಣೆ ನಡೆಸುತ್ತಿದೆ. ಇತರೆ ನಗರ /ಜಿಲ್ಲೆಗಳಲ್ಲಿ ಅನಧಿಕೃತವಾಗಿ ಪ್ರವೇಶಿಸುವ ವಿದೇಶಿಯರುಗಳ ಪತ್ತೆಯ ಬಗ್ಗೆ Special Task force ರಚಿಸಿದ್ದು, ಅದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು