10:48 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ; 3 ಮಂದಿ ಬಂಧನ

19/12/2024, 23:51

ಜಯಾನಂದ ಪೆರಾಜೆ ಮಂಗಳೂರು

info.reporterkarnataka@gmail.com

ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ನಗರದ ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
2025ರ ಹೊಸ ವರ್ಷ ಸ್ವಾಗತಿಸಲು ದಿನಗಣನೆ ಶುರುವಾಗಿದೆ. ಮಂಗಳೂರು,ಬೆಂಗಳೂರು ಸೇರಿದಂತೆ ಎಲ್ಲೆಡೆ ಹೊಸ ವರ್ಷಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಯುವ ಸಮೂಹವಂತೂ ನ್ಯೂ ಇಯರ್ ಸೆಲೆಬ್ರೆಷನ್​​ಗೆ ಭರ್ಜರಿ ಪ್ಲಾನಿಂಗ್​ ನಡೆಸಿದ್ದಾರೆ. ಈ ಮಧ್ಯೆ ಡ್ರಗ್ಸ್ ಮತ್ತು ಮಾದಕ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ 9 ಲಕ್ಷ ರೂ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದಲ್ಲಿ ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಬಂಧಿತ ಆರೋಪಿಗಳು.
5 ಕೆಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7 ಗ್ರಾಂ ಕೋಕೆನ್, 17 ಗ್ರಾಂ ಎಂಡಿಎಂಎ ಪಿಲ್ಸ್, 100 ಗ್ರಾಂ ಚರಸ್, 8 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು 3 ಎಲ್​​ಎಸ್​ಡಿ ಸ್ಟ್ರಿಪ್ಸ್ ಸೇರಿದಂತೆ ಹರಿತವಾದ ಚಾಕು, ಮಾದಕ ವಸ್ತು ಸಾಗಾಟ ಮಾಡಲು ಉಪಯೋಗಿಸಿದ ಕಾರು ಮತ್ತು ಸ್ಕೂಟರ್ ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು