ಇತ್ತೀಚಿನ ಸುದ್ದಿ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ
20/12/2024, 10:49
ಮಂಡ್ಯ(reporterkarnataka.com):ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.
ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ , ಚೆಸ್ಕಾಂ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ,ಶಾಸಕರಾದ ನರೇಂದ್ರಸ್ವಾಮಿ,ರವಿ ಕುಮಾರ್, ಮಧು ಮಾದೇಗೌಡ,ದಿನೇಶ್ ಗೂಳಿಗೌಡ,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ ಮತ್ತಿತರರು ಉಪಸ್ಥಿತರಿದ್ದರು.