ಇತ್ತೀಚಿನ ಸುದ್ದಿ
ಬೆಂಗಳೂರು: ಕಾರಿನ ಮೇಲೆ ಬಿದ್ದ ಕಂಟೈನರ್ ಟ್ರಕ್: ಇಬ್ಬರು ಮಕ್ಕಳು ಸಹಿತ 6 ಮಂದಿ ದಾರುಣ ಸಾವು
21/12/2024, 21:03
ಬೆಂಗಳೂರು(reporterkarnataka.com):ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.
ಕಂಟೈನರ್ ಟ್ರಕ್ ಪಲ್ಟಿತಯಾಗಿ ಕಾರಿನ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಕಂಟೈನರ್ ಅಡಿಗೆ ಸಿಲುಕಿದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ
ಘಟನೆ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ
ನೆಲಮಂಗಲದ ತಾಳೆಕೆರೆ ಬಳಿ ನಡೆದಿದೆ. ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.