1:28 AM Wednesday13 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

21/12/2024, 23:44

ಬೆಂಗಳೂರು(reporterkarnataka.com): ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಆಹ್ವಾನಿಸಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಬಾರಿಯೂ ಸಮ್ಮೇಳನ ಉದ್ಘಾಟನೆಗೆ ಬಂದಿದ್ದೇನೆ. ಈ ಬಾರಿಯೂ ಬರುತ್ತೇನೆ. ಸಮ್ಮೇಳನಕ್ಕೆ ಅಗತ್ಯವಾದ ಸಹಕಾರವನ್ನು ನೀಡುತ್ತೇನೆ ಎಂದು ತಿಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಡಿಸೆಂಬರ್‌ನಲ್ಲಿ ಸಮ್ಮೇಳನ ಮಾಡಲು ಉದ್ದೇಶಿಸಲಾಗಿತ್ತು. ತಾವು ನೀಡಿದ ಸಲಹೆ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಯಿತು ಎಂದು ಹೇಳಿದಾಗಲೂ ಪ್ರತಿಕ್ರಿಯಿಸಿದ ಸಿಎಂ, ಪತ್ರಕರ್ತರ ಸಮ್ಮೇಳನ ಚೆನ್ನಾಗಿ ಆಯೋಜಿಸಿ. ಚರ್ಚೆಗಳಾಗಲಿ. ಖಂಡಿತವಾಗಿ ಬರುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಶೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಡಿ.ಎಂ.ಸತೀಶ್, ಟಿ.ಎನ್.ಮಧುಕರ್, ಅನು ಶಾಂತರಾಜು, ಜಿಲ್ಲಾ ಪದಾಧಿಕಾರಿಗಳಾದ ಸತೀಶ್ ಹಾರೋಗೆರೆ, ಪರಮೇಶ್, ಯಶಸ್, ಹರೀಶ್ ಆಚಾರ್ಯ, ಕೆ.ವಿ.ಪುರುಷೋತ್ತಮ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು