11:57 AM Saturday10 - October 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ…

ಇತ್ತೀಚಿನ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

22/12/2024, 16:13

*371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ*

ಕಲಬುರಗಿ(reporterkarnataka.com): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌.
ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.
*ತೊಗರಿ ಪ್ಯಾಕೇಜ್:*
ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ. ನಿರ್ಧಾರ ಕೈಗೊಳ್ಳಲಾಗುವುದು ಎಂದರು.
*ಜಯದೇವ ಮಹತ್ವದ ಹೆಜ್ಜೆ:* ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.
*ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ:*
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು