2:34 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

23/12/2024, 23:39

ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು,
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು