1:39 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು