12:16 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಈ-ಖಾತಾ ಮಾಡಲು ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾಪಂ ಪಿಡಿಒ ಬಂಧನ

25/12/2024, 14:09

ಶಿವಮೊಗ್ಗ (reporterkarnataka.com) ಇ-ಖಾತೆ ಮಾಡಿಕೊಡಲು 5 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಪಂ ಪ್ರಭಾರ ಪಿಡಿಒ ಈಶ್ವರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ಅವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ.
ಮಹಮ್ಮದ್ ಗೌಸ್ ಅವರ ತಂದೆ ಭಾಷಾ ಸಾಬ್‌ ಅವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು ಹೊಂದಿದ್ದು, ಅದರಲ್ಲಿ ಒಂದು ಮನೆಯನ್ನು ಕಟ್ಟಿಕೊಂಡಿರುತ್ತಾರೆ. ಆ ಮನೆಯ ಮೇಲೆ ಲೋನ್ ತೆಗೆದುಕೊಳ್ಳುವ ಸಂಬಂಧ, ಮನೆ ಇರುವ ಜಾಗವನ್ನು ತನ್ನ ತಾಯಿ ಮಮ್ರಾಜ್ ಅವರ ಹೆಸರಿನಲ್ಲಿ ಈ-ಖಾತಾ ಮಾಡಿಕೊಡುವಂತೆ ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿಯನ್ನು ಸಲ್ಲಿಸಿದ್ದು, ಇಂಡುವಳ್ಳಿ ಗ್ರಾಮದ ಪ್ರಭಾರ ಪಿಡಿಒ ರವರಾದ ಈಶ್ವರಪ್ಪ ಅವರು ಮನೆ ಜಾಗಕ್ಕೆ ಬಂದು ಅಳತೆ ಮಾಡಿಕೊಂಡು ಹೋಗಿದ್ದು, ಈ-ಖಾತಾ ಕೊಡುವಂತೆ ಹಲವಾರು ಬಾರಿ ಈಶ್ವರಪ್ಪ ರವರ ಹತ್ತಿರ ಕೇಳಿದಾಗ ಅವರು ಪಿರ್ಯಾದುದಾರರಿಗೆ ಈ-ಖಾತಾವನ್ನು ಕೊಟ್ಟಿರುವುದಿಲ್ಲ.
ಡಿ.20 ರಂದು ಈಶ್ವರಪ್ಪ ರವರು ಪಿರ್ಯಾದಿ ಬಳಿ ಈ ಸ್ವತ್ತು ಮಾಡಿಕೊಡಲು 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಪಿರ್ಯಾದುದಾರರಿಗೆ ಲಂಚದ ಹಣ ನೀಡಲು ಇಷ್ಟವಿಲ್ಲದೆ ಈಶ್ವರಪನವರ ವಿರುದ್ಧ ಕ್ರಮಕ್ಕಾಗಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿ ಡಿ.24 ರಂದು ಬೆಳಗ್ಗೆ ಸೊರಬ ಪೋಸ್ಟ್ ಆಫೀಸ್ ಕಚೇರಿ ಬಳಿ ಅಪಾದಿತ ಅಧಿಕಾರಿ ಪಿರ್ಯಾದಿಯಿಂದ 5000/- ಲಂಚದ ಹಣವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಈ ಕಾರ್ಯಾಚರಣೆಯನ್ನು ಮಂಜುನಾಥ ಚೌಧರಿ. ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರ ನೇತೃತ್ವದಲ್ಲಿ ನಡೆಸಲಾಗಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಹೆಚ್.ಎಸ್ ಸುರೇಶ್, ಸಿಬ್ಬಂದಿಯವರಾದ ಯೋಗೇಶ್ ಸಿ.ಹೆಚ್.ಸಿ, ಮಂಜುನಾಥ ಎಂ. ಸಿ.ಹೆಚ್.ಸಿ, ಸುರೇಂದ್ರ ಸಿ.ಹೆಚ್.ಸಿ, ಪ್ರಶಾಂತ್ ಕುಮಾರ್,ಹೆಚ್. ಸಿ.ಪಿ.ಸಿ. ಚೆನ್ನೇಶ್, ಸಿ.ಪಿ.ಸಿ ದೇವರಾಜ್, ಸಿ.ಪಿ.ಸಿ, ಅರುಣ್ ಕುಮಾರ್ ಯು.ಬಿ ಸಿ.ಪಿ.ಸಿ. ಅಂಜಲಿ, ಮ.ಪಿ.ಸಿ ಜಯಂತ್ ಎ.ಪಿ.ಸಿ ಮತ್ತು ಪ್ರದೀಪ್ ಎ.ಪಿ.ಸಿ. ರವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು