1:09 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

25/12/2024, 17:59

ಬೆಂಗಳೂರು(reporterkarnataka.com): ದೇಶದಲ್ಲಿ ಎರಡು ರೀತಿಯ ಕಾಂಗ್ರೆಸ್ ಇದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರೀಯತೆಯ ಕಾಂಗ್ರೆಸ್ ಇತ್ತು. ಈಗ ಜನ ವಿರೋಧಿ, ದೇಶ ವಿರೋಧಿ ಕಾಂಗ್ರೆಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದ ಶತಮಾನೋತ್ಸವವನ್ನು ಕಾಂಗ್ರೆಸ್ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಈಗಿನದು ಜನ ವಿರೋಧಿ, ಮತ್ತು ದೇಶ ವಿರೋಧಿ ಕಾಂಗ್ರೆಸ್ ಆಗಿದೆ ಎಂದು ಹೇಳಿದರು.
ಈ ಸರ್ಕಾರ ಸಂಪೂರ್ಣ ಪೊಲಿಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ. ಹಿರಿಯ ಅಧಿಕಾರಿಗಳು ಕಾನ್ಸ್ ಟೇಬಲ್ ರೀತಿ ನಡೆದುಕೊಳ್ಳುತ್ತಿದ್ದಾರೆ. ಯಾರು ನ್ಯಾಯ ಸಮ್ಮತವಾಗಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ಶಿಕ್ಷೆ ಕೊಡಲಾಗುತ್ತಿದೆ. ಪೊಲಿಸರು ಕಾನೂನಿಗೆ ನಿಷ್ಠೆ ಇರಬೇಕು. ಕಾಂಗ್ರೆಸ್ ನವರಿಗೆ ತಮಗೆ ನಿಷ್ಠೆ ಇರುವ ಪೊಲಿಸ್ ಅಧಿಕಾರಿಗಳು ಬೇಕಾಗಿದ್ದಾರೆ. ಹೀಗಾಗಿ ಪೊಲಿಸ್ ಇಲಾಖೆಯನ್ನು ಪಕ್ಷಗಳ ಆಧಾರದಲ್ಲಿ ವಿಭಜಿಸುವಂತದ್ದು, ಯುನಿಫಾರ್ಮ್ ನಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ನೀಡುವುದರಿಂದ ಅವರ ನೈತಿಕತೆ ಕುಸಿಯುತ್ತಿದೆ. ತಕ್ಷಣವೇ ಈ ವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ಬಹಳ ದೊಡ್ಡ ಸಮಸ್ಯೆ ಎದುರಾಗಲಿದೆ ಎಂದು ಹೇಳಿದರು.
*ದುರಾಡಳಿತ ಮಿತಿಮೀರಿದೆ:*
ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರ ದುರಾಡಳಿತ ಮಿತಿ ಮೀರುತ್ತಿದೆ. ಕಾನೂನು ಕೈಗೆ ತೆಗೆದುಕೊಳ್ಳಬಾರದು ಎನ್ನುವ ಕನಿಷ್ಠ ಜ್ಞಾನ ಇವರಿಗೆ ಇಲ್ಲ ಎಂದರೆ, ಇವರು ನೂರನೇ ವರ್ಷಾಚರಣೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
*ಹಲವಾರು ಶಾಕ್:*
ಕಲಬುರ್ಗಿಯಲ್ಲಿ ಮಹಿಳೆಗೆ ರಸ್ತೆಯಲ್ಲಿ ವಿದ್ಯುತ್ ಶಾಕ್ ಹೊಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಕೇವಲ ವಿದ್ಯುತ್ ಶಾಕ್ ಅಷ್ಟೇ ಅಲ್ಲ ಹಲವಾರು ಶಾಕ್ ಗಳನ್ನು ಕೊಟ್ಟಿದೆ. ಬಾಣಂತಿಯರಿಗೆ ಕಪ್ಪು ಪಟ್ಟಿಗೆ ಸೇರಿದ ಕಂಪನಿ ಸರಬರಾಜು ಮಾಡಿರುವ ಅವಧಿ ಮೀರಿದ ಔಷಧಗಳನ್ನು ನೀಡಿ ಶಾಕ್ ಕೊಟ್ಟಿದೆ. ಇದು ಈ ಸರ್ಕಾರದಲ್ಲಿ ಸಾಮಾನ್ಯ ಜನರು ಸುರಕ್ಷಿತವಾಗಿಲ್ಲ ಎನ್ನುವುದನ್ನು ತೋರಿಸುತ್ತದೆ. ಕಾನೂನು ಸುವ್ಯವಸ್ಥೆ, ರಸ್ತೆ, ಕುಡಿಯುವ ನೀರು, ಆರೋಗ್ಯ, ವಿದ್ಯುತ್ ಯಾವ ವಿಚಾರದಲ್ಲಿಯೂ ಜನರು ಸುರಕ್ಷಿತವಾಗಿಲ್ಲ ಎಂದು ಹೇಳಿದರು.
ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದರ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ವಿಚಾರದಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್ ಬಣ್ಣ ಬಯಲಾಗಿದೆ‌. ಹೀಗಾಗಿ ಅದನ್ನು ಮುಚ್ಚಿಕೊಳ್ಳಲು ಈ ರೀತಿಯ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು