10:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ?

25/12/2024, 19:13

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿದರು.
ಪಟ್ಟಣದ ಅನ್ನಪೂರ್ಣ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಸಹ ನಡೆಯಲಿದೆ. ತೀರ್ಥಸ್ನಾನದ ಸಂಜೆ ಶಮಿತಾ ಮಲ್ನಾಡ್ ಅವರ ಹಾಡು ಹಾಗೂ ನೃತ್ಯ ಕಾರ್ಯಕ್ರಮ ಹಾಗೂ ಉದಯ್ ಶೆಟ್ಟಿ ಅವರ ಕಾರ್ಯಕ್ರಮ ಈ ಬಾರಿ ವಿಶೇಷವಾಗಿ ನಡೆಯಲಿದೆ ಎಂದು ತಿಳಿಸಿದರು.
*ಬಿ ಕಾಂ ಜಾತ್ರೆ ವಿಶೇಷ ಏನು:?*
ಈ ಬಾರಿ ತೆಪ್ಪೋತ್ಸವ ಸಮಿತಿ ಬಿ ಕಾಂ ಸಮಿತಿ ಆಗಿದೆ ಎಂದು ಮತ್ತೊರ್ವ ಸಂಚಾಲಕ ಡಾ. ಸುಂದರೇಶ್ ಹೇಳಿದರು. ಬಿ ಅಂದರೆ ಬಿಜೆಪಿ ಹಾಗೂ ಕಾಂ ಎಂದರೆ ಕಾಂಗ್ರೆಸ್ ಎರಡು ಪಕ್ಷಗಳು ಒಟ್ಟಿಗೆ ಈ ಬಾರಿ ಜಾತ್ರೆಯನ್ನು ಮಾಡುತ್ತಿದೆ. ಈ ಬಾರಿ ಕಳೆದ ಬಾರಿಗಿಂತ ಅತ್ಯಂತ ವೈಭವದಿಂದ ಜಾತ್ರೆ ನಡೆಯಲಿದೆ. ಜಾತ್ರೆಯ ಅಧ್ಯಕ್ಷರು ಶಾಸಕ ಆರಗ ಜ್ಞಾನೇಂದ್ರ, ಉಪಾಧ್ಯಕ್ಷರಾಗಿ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಇರಲಿದ್ದಾರೆ. ತಹಸೀಲ್ದಾರ್ ಜಾತ್ರೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಡಿ. 28ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು ಡಿ. 30 ರಂದು ತೀರ್ಥಸ್ನಾನ, ಡಿ. 31 ರಂದು ಬ್ರಹ್ಮ ರಥೋತ್ಸವ, ಜ. 1 ರಂದು ಅದ್ದೂರಿ ತೆಪ್ಪೋತ್ಸವ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು