9:32 AM Friday18 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

ಕುಂಭಮೇಳ: ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರ

25/12/2024, 19:14

ಬೆಂಗಳೂರು(reporterkarnataka.com): ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು