1:10 PM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

25/12/2024, 23:54

ಬೆಂಗಳೂರು(reporterkarnataka.com): ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ರೈಲು ಸಂಖ್ಯೆ 06520 ಕಲಬುರಗಿ – ಎಸ್ ಎಂ ವಿ ಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ಗಳಲ್ಲಿ ನಿಲುಗಡೆ ಇರಲಿದೆ.
ಈ ವಿಶೇಷ ರೈಲು ಮೂರು ಎಸಿ ತ್ರಿ ಟೈರ್ ಬೋಗಿಗಳು, ಮೂರು ದ್ವಿತೀಯ ದರ್ಜೆ ಸ್ಲೀಪರ್ ಕ್ಲಾಸ್ ಬೋಗಿಗಳು, ಒಂಬತ್ತು ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ) ಬೋಗಿಗಳನ್ನು ಹೊಂದಿರಲಿದೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು